ಮುಂಬೈ:ವಿವಾದಿತ ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್​​ ಅವರ ತಂದೆ ದಿಲೀಪ್ ಖೇಡ್ಕರ್ ವಿರುದ್ಧ ಪುಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ನೌಕರನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ. ಪುಣೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯ ತಹಸೀಲ್ದಾರ್ ಮಟ್ಟದ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಬಂಡ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ(ಆಗಸ್ಟ್​​ 17) ತಿಳಿಸಿದ್ದಾರೆ.
ಇದನ್ನು ಓದಿ:ಅಬಕಾರಿ ನೀತಿ ಪ್ರಕರಣ; ದೆಹಲಿ ಮಾಜಿ ಡಿಸಿಎಂಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್​​​
ಪೂಜಾ ಖೇಡ್ಕರ್ ಅವರನ್ನು ಅಸಿಸ್ಟೆಂಟ್ ಕಲೆಕ್ಟರ್ ಆಗಿ ಪೋಸ್ಟಿಂಗ್ ಮಾಡುವಾಗ ದಿಲೀಪ್ ಖೇಡ್ಕರ್ ಅವರು ತಹಸೀಲ್ದಾರ್ ದೀಪಕ್ ಆಕಾಡೆ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆಡಳಿತಾತ್ಮಕ ಕೆಲಸದಲ್ಲಿ ಹಸ್ತಕ್ಷೇಪ ಮಾಡುವ ಹಕ್ಕು ಅವರಿಗಿಲ್ಲದಿದ್ದರು, ದೀಲಿಪ್​ ಅವರು ತಮ್ಮ ಮಗಳಿಗೆ ಕ್ಯಾಬಿನ್​ ಮಂಜೂರು ಮಾಡುವಂತೆ ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ
ಜಿಲ್ಲಾಡಳಿತದಿಂದ ದೂರನ್ನು ಸ್ವೀಕರಿಸಿದ ನಂತರ, ನಾವು ದಿಲೀಪ್ ಖೇಡ್ಕರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 186 (ಅಧಿಕೃತ ಕಾರ್ಯಗಳಿಗೆ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), IPC 504 (ಉದ್ದೇಶಪೂರ್ವಕ ಅವಮಾನ) ಮತ್ತು IPC 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಪುಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿವಾದಗಳಲ್ಲಿ ಸಿಲುಕಿದ್ದ ಪೂಜಾ ಖೇಡ್ಕರ್ ವಿರುದ್ಧ ಇತ್ತೀಚೆಗೆ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್​ಸಿ) ಪ್ರಮುಖ ಕ್ರಮಕೈಗೊಂಡಿದ್ದು ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಿತ್ತು. ಇದರೊಂದಿಗೆ ಆಯೋಗವು ಮುಂದೆ ಯಾವುದೇ ಸರ್ಕಾರಿ ಪರೀಕ್ಷೆಗೆ ಹಾಜರಾಗದಂತೆ ಪೂಜಾ ಅವರನ್ನು ನಿಷೇಧಿಸಿದೆ.
ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದ ಜಿಲ್ಲಾ ನ್ಯಾಯಾಲಯ ಆದೇಶವನ್ನು ಪ್ರಶ್ನಿಸಿ ಪೂಜಾ ಖೇಡ್ಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್​​ ಆಗಸ್ಟ್ 12ರಂದು ನಿಗದಿಪಡಿಸಿದೆ. (ಏಜೆನ್ಸೀಸ್​​)
ನೀರಜ್​ ತಾಯಿಯ ಹೇಳಿಕೆಗೆ ‘ನಮೋ’ ಶ್ಲಾಘನೆ; ಚಿನ್ನದ ಹುಡುಗನಿಗೆ ಫೋನ್​​ನಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twelve + seven =
Remember me
