ಬೆಂಗಳೂರು:ರೈತರ ಟ್ರ್ಯಾಕ್ಟರ್ ರ‌್ಯಾಲಿ ಸಂಬಂಧ ವಿವಾದಾತ್ಮಕ ಹೇಳಿಕೆ ಟ್ವೀಟ್ ಮಾಡಿದ ಆರೋಪದಡಿ ಕೇರಳ ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಕೇರಳ ಕಾಂಗ್ರೆಸ್ ಸಂಸದ ಶಶಿ ತರೂರ್, ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ , ಮಿರ್ನಲ್ ಪಾಂಡೆ, ಜಾಫರ್ ಆಗಾ, ಅನಂತನಾಥ್, ಪರೇಶ್ ನಾಥ್, ವಿನೋದ್ ಕೆ. ಜೋಷ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಜ.26ರಂದು ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್ ರ‌್ಯಾಲಿ ನಡೆಸಿದರು. ಈ ವೇಳೆ ಉಂಟಾದ ಗಲಭೆಯಲ್ಲಿ ಒಬ್ಬ ವ್ಯಕ್ತಿ ಬಲಿಯಾಗಿದ್ದಾನೆ ಎಂದು ಟ್ವೀಟ್ ಮಾಡಿದ್ದಾರೆ. ಸುಳ್ಳು ಸಂದೇಶ ಪ್ರಚಾರ ಮಾಡಿ ದ್ವೇಷ ಮತ್ತು ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ಉಂಟು ಮಾಡಿದ್ದು, ಧರ್ಮಗಳ ನಡುವೆ ದ್ವೇಷ ಭಾವನೆ ಉಂಟು ಮಾಡಿದ್ದಾರೆ. ಮತೀಯ ಭಾವನೆಗೆ ನೋವುಂಟು ಮಾಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಖಾಸಗಿ ಕಂಪನಿ ನೌಕರ ಬಿ.ಎಸ್. ರಾಕೇಶ್ ಎಂಬುವರು ದೂರು ನೀಡಿದ್ದಾರೆ. ಈ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಸಲ ಶಾಲೆಗೆ ಡೊನೇಷನ್​ ನೀಡಬೇಡಿ, ಫೀಸು ಕೂಡ ಪೂರ್ತಿ ಕೊಡಬೇಡಿ..

ತನ್ನನ್ನು ಭೇಟಿಯಾಗಲು ಮಗಳೊಂದಿಗೆ ಬಂದವಳನ್ನು ಅವನು ಚುಚ್ಚಿ ಚುಚ್ಚಿ ಕೊಂದ; ಗಂಡ-ಹೆಂಡತಿ-ಮಗಳು ಮತ್ತು ಅವನು..!!!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 6 =
Remember me
