ಶ್ರೀನಗರ:ಕಾಶ್ಮೀರ ಪ್ರತ್ಯೇಕವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಮೃತದೇಹಕ್ಕೆ ಪಾಕಿಸ್ತಾನ ಧ್ವಜ ಹೊದಿಸಿ, ದೇಶ ವಿರೋಧಿ ಘೋಷಣೆ ಕೂಗಿದ ಗಿಲಾನಿ ಕುಟುಂಬದವರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಸೆಪ್ಟೆಂಬರ್ 2ರಂದು ಬದ್ಗಾಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಗಿಲಾನಿ ಅಂತ್ಯ ಸಂಸ್ಕಾರದ ವೇಳೆ ಮೃತದೇಹಕ್ಕೆ ಪಾಕಿಸ್ತಾನದ ಧ್ವಜ ಹೊದಿಸಿದ್ದಾರೆ. ಅಲ್ಲದೇ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿಯೂ ಗಿಲಾನಿ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕಾಶ್ಮೀರದಲ್ಲಿ ಶುಕ್ರವಾರ ರಾತ್ರಿ ಇಂಟರ್​​ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದರು.
ನಮ್ಮ ತಂದೆಯ ಮೃತದೇಹವನ್ನು ಬಲವಂತವಾಗಿ ಪೊಲೀಸರು ತೆಗೆದುಕೊಂಡು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅದಲ್ಲದೇ ಮನೆಯ ಮಹಿಳೆಯರನ್ನು ಮತ್ತು ಕುಟುಂಬಸ್ಥರನ್ನು ಥಳಿಸಿದ್ದಾರೆ ಎಂಬ ಗಿಲಾನಿ ಪುತ್ರ ನಸೀಮ್ ಗಿಲಾನಿ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. ಪೊಲೀಸರ ವಿರುದ್ಧದ ಆರೋಪಗಳು ಆಧಾರ ರಹಿತವಾಗಿವೆ, ಗಿಲಾನಿ ಅಂತಿಮ ವಿಧಿ-ವಿಧಾನಗಳನ್ನು ಪೂರೈಸಲು ಪೊಲೀಸರು ಕುಟುಂಬಕ್ಕೆ ಎಲ್ಲ ರೀತಿಯಿಂದಲೂ ಸಹಾಯ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
8 ತಿಂಗಳು ಹೊಟೇಲ್​​​ನಲ್ಲಿ ಠಿಕಾಣಿ ಹೂಡಿ ಬಿಲ್ ಕಟ್ಟದ ಆಸಾಮಿ, ಎಸ್ಕೇಪ್ ಆಗೋಕೆ ಮಾಡಿದ ಪ್ಲಾನ್ ಇದು…!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 14 =
Remember me
