ನವದೆಹಲಿ:ಬೇಸಿಗೆಯಲ್ಲಿ ಒಂದೆಡೆ ತಾಪಮಾನ ವಿಕೋಪಕ್ಕೆ ಹೋಗುತ್ತಿದ್ದು, ಬೆಂಕಿ ಆಕಸ್ಮಿಕ ಸಂಭವಿಸುವ ಸಾಧ್ಯತೆಗಳೂ ಅಧಿಕ. ಅದಕ್ಕೆ ಪೂರಕ ಎಂಬಂತೆ ಇಂದು ಕಾಂಗ್ರೆಸ್​ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣ ನಡೆದಿದೆ.
ದೆಹಲಿಯ ಅಕ್ಬರ್ ರಸ್ತೆಯ ನಂ. 24ರಲ್ಲಿ ಇರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಈ ಅಗ್ನಿ ಆಕಸ್ಮಿಕ ಸಂಭವಿಸಿದೆ. ರಾತ್ರಿ ಏಳು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವು ಆತಂಕದ ವಾತಾವರಣ ಉಂಟಾಗಿತ್ತು.
ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿದ್ದು, ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಛಾವಣಿಯಲ್ಲಿ ಬಿದ್ದಿದ್ದ ತರಗೆಲೆ ಹಾಗೂ ಎಸಿ ಡಕ್ಟ್​ನಲ್ಲಿ ಕಾಣಿಸಿಕೊಂಡ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಉಂಟಾಗಿದೆ ಎನ್ನಲಾಗಿದ್ದು, ಈ ಘಟನೆಯಲ್ಲಿ ಯಾರಿಗೂ ಗಾಯ ಇತ್ಯಾದಿ ನೋವು ಸಂಭವಿಸಿಲ್ಲ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದು ರುದ್ರಭೂಮಿಯಲ್ಲಿನ ಸಮಾಧಿಗಳನ್ನು ವಿರೂಪಗೊಳಿಸಿದ ಎಸ್​ಡಿಪಿಐ?!

ದೆಹಲಿಯಲ್ಲಿ ಧರ್ಮೇಂದ್ರ ಪ್ರಧಾನ್ ಜತೆ ನಡೆಯಿತು ಸಚಿವ-ಸಂಸದರ ಮಹತ್ವದ ಮಾತುಕತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 13 =
Remember me
