ಮುಂಬೈ:ಮಹಾರಾಷ್ಟ್ರ ರಾಜಧಾನಿಯಲ್ಲಿ ಭಾರಿ ಅಗ್ನಿ ಅನಾಹುತ ಜರುಗಿದೆ. ಉಪನಗರ ಗೋರೇಗಾಂವ್​ನಲ್ಲಿ ಶುಕ್ರವಾರ 7ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಹಿಳೆಯರು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ. ಬೆಂಕಿ ಅವಘಡದಲ್ಲಿ 51 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಸಿರಿಯಾದಲ್ಲಿ ಭೀಕರ ಡ್ರೋಣ್​ ದಾಳಿ: 100ಕ್ಕೂ ಹೆಚ್ಚು ಮಂದಿ ದುರ್ಮರಣಗೋರೆಗಾಂವ್​ನ ಪಶ್ಚಿಮದ ಎಂಜಿ ರಸ್ತೆಯಲ್ಲಿನ ಕಟ್ಟಡದಲ್ಲಿ ನಿವಾಸಿಗಳು ಮುಂಜಾನೆ ಸವಿನಿದ್ರೆಯಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಪಕ್ಕದ ಮನೆಗಳಿಗೂ ವ್ಯಾಪಿಸಿದೆ. ಬೆಂಕಿ ನೆಲ ಮಹಡಿಯಲ್ಲಿ ಪ್ಲೈವುಡ್, ಸ್ಕ್ರ್ಯಾಪ್ ವಸ್ತುಗಳು ಇದ್ದಿದ್ದರಿಂದ ಕ್ಷಣಾರ್ಧದಲ್ಲಿ ಇಡೀ ನೆಲಮಾಳಿಗೆ ವ್ಯಾಪಿಸಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಇಬ್ಬರು ಪುರುಷ ಮತ್ತು ಐವರು ಮಹಿಳೆಯರು ಬೆಂಕಿಯ ಕೆನ್ನಾಲಿಗೆಗೆ ದಹಿಸಿ ಹೋಗಿದ್ದರು. 15 ಮಂದಿ ಕೂಪರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಸುಮಾರು 2000 ಚದರ ಅಡಿಯಲ್ಲಿರುವ ಬಾಗಿಲುಗಳು, ಕಿಟಕಿಗಳು, ಪೀಠೋಪಕರಣಗಳು ಸೇರಿದಂತೆ ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿಕ್ಕಿಂ ಪ್ರವಾಹ: 21 ಸಾವು, 100 ಕ್ಕೂ ಹೆಚ್ಚು ಮಂದಿ ನಾಪತ್ತೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
