ದೆಹಲಿ:ಬಹುಮಹಡಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅದರಲ್ಲಿ ಕನಿಷ್ಠ 26 ಮಂದಿ ಸಾವಿಗೀಡಾಗಿದ್ದು, 40 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಅಗ್ನಿದುರಂತ ಸಂಭವಿಸಿದೆ.
ಪಶ್ಚಿಮ ದೆಹಲಿಯ ಮುಂಡ್ಕ ಮೆಟ್ರೊ ಸ್ಟೇಷನ್ ಬಳಿಯ ನಾಲ್ಕು ಮಹಡಿಯ ವಾಣಿಜ್ಯ ಕಟ್ಟಡದಲ್ಲಿ ಇಂದು ಈ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇದುವರೆಗೆ 26 ಶವಗಳನ್ನು ಹೊರತೆಗೆಯಲಾಗಿದ್ದು, 40 ಮಂದಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, 60ರಿಂದ 70 ಜನರನ್ನು ಈ ಕಟ್ಟಡದಿಂದ ಈಗಾಗಲೇ ರಕ್ಷಿಸಲಾಗಿದ್ದು, ಇನ್ನೂ ಒಂದು ಮಹಡಿಯಲ್ಲಿ ಶೋಧ ನಡೆಯಬೇಕಿದೆ. ಘಟನಾ ಸ್ಥಳಕ್ಕೆ 20 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ನೂರಾರು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದ್ದು, ಪರಿಸ್ಥಿತಿ ಇನ್ನೂ ಪೂರ್ತಿಯಾಗಿ ನಿಯಂತ್ರಣಕ್ಕೆ ಬಂದಿಲ್ಲವಾದ್ದರಿಂದ ಕಾರ್ಯಾಚರಣೆ ಮುಂದುವರಿದಿದೆ.
ದುರಂತದಲ್ಲಿ ಸಾವಿಗೀಡಾದವರಿಗೆ ಶಾಂತಿ ಕೋರಿ, ಅವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ ಮತ್ತು ಪ್ರಧಾನಿ ನರೇಂದ್ರ ಮೋದಿ ಮುಂತಾದವರು ಸಾಂತ್ವನ ತಿಳಿಸಿದ್ದಾರೆ.
ಬಣ್ಣಬಣ್ಣದ ಡಿಸೈನ್ ಕಾರೊಳಗಿತ್ತು ಕೊಳೆತ ಶವ; 2 ವರ್ಷಗಳಿಂದ ಒಂದೇ ಕಡೆ ನಿಲ್ಲಿಸಲಾಗಿದ್ದ ಕಾರು!

ವಿದ್ಯುತ್ ಸ್ಪರ್ಶದಿಂದಾಗಿ ‘ಜೂನಿಯರ್ ರವಿಚಂದ್ರನ್​’ ಸಾವು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 8 =
Remember me
