ವಿಶಾಖಪಟ್ಟಣಂ:ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಮಲ್ಕಾಪುರಂನ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಸ್ಥಾವರದಲ್ಲಿ ಮಂಗಳವಾರ ಸಂಜೆ ವೇಳೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
ಸ್ಥಳಕ್ಕೆ ಭಾರತೀಯ ನೌಕಾಪಡೆಯ ತಜ್ಞರ ತಂಡವೂ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಸಹಾಯ ಮಾಡಿದೆ. ಬೆಂಕಿಯಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಖಚಿತಪಡಿಸಲಾಗಿದೆ. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಸೂಕ್ತ ಸಮಯದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ ವಿನಯ್ ಚಂದ್ ಅವರ ನೇತೃತ್ವದಲ್ಲಿ ಬೆಂಕಿ ನಂದಿಸುವ ಕೆಲಸವಾಗಿದೆ.
ಎಚ್‌ಪಿಸಿಎಲ್ ಸ್ಥಾವರದ ಕಚ್ಚಾ ಬಟ್ಟಿ ಇಳಿಸುವಿಕೆಯ ಘಟಕದಲ್ಲಿ (ಸಿಡಿಯು) ಪೈಪ್‌ಲೈನ್‌ನಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆ ತಿಳಿಸಿದೆ. ಅಪಘಾತದ ನಂತರ ಸಿಡಿಯು ಮುಚ್ಚಲಾಗಿದೆ. ಸ್ಥಳೀಯ ಆಡಳಿತವು ಬೆಂಕಿಗೆ ಕಾರಣವೇನು ಮತ್ತು ಯಾವುದೇ ಅಪಘಾತ ಸಂಭವಿಸಿದೆಯೇ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದೆ. (ಏಜೆನ್ಸೀಸ್)
ಕರೊನಾ ಓಡಿಸೋಕೆ 101 ಬಿಂದಿಗೆ ನೀರು, 101 ನಿಂಬೆಹಣ್ಣು ಇಟ್ಟು ಪೂಜೆ!

ಅತ್ತೆಯ ಕುಪ್ಪಸದಿಂದ ಅವಳದ್ದೇ ಕತ್ತು ಹಿಸುಕಿದ ಸೊಸೆ! ಪೊದೆಯಲ್ಲಿ ಅಡಗಿತ್ತು ಮಗ ಸೊಸೆಯ ರಹಸ್ಯ

ಅಶ್ಲೀಲ ಸಿಡಿ ಕೇಸ್‌ಗೆ ಬಿಗ್ ಟ್ವಿಸ್ಟ್​! ವಿಡಿಯೋದಲ್ಲಿ ಇರುವುದು ನಾನೇ, ಸಹಮತದಿಂದ ಒಟ್ಟಿಗೆ ಇದ್ದೆವೆಂದ ಜಾರಕಿಹೊಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 16 =
Remember me
