ಅಹಮದಾಬಾದ್‌:ಬಹುಮಹಡಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 100 ರೋಗಿಗಳನ್ನು ಸ್ಥಳಾಂತರಿಸಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ.ಇದನ್ನೂ ಓದಿ:ಪಾಕಿಸ್ತಾನ, ಚೀನಾ, ಭಾರತ ಆಯ್ತು.. ಈಗ ಶ್ರೀಲಂಕಾದಿಂದ ಬಂದು ಯುವಕನನ್ನು ವರಿಸಿದ ಯುವತಿಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರದಂದು ಬೆಳಗಿನ ಜಾವ 4.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಆಸ್ಪತ್ರೆಯ ನೆಲಮಾಳಿಗೆಯಿಂದ ಹೊಗೆ ಹೊರಹೊಮ್ಮುತ್ತಲೇ ಇದ್ದು, ಮೇಲಿನ ಮಹಡಿವರೆಗೂ ತಲುಪಿದೆ. ಈ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ 100ಕ್ಕೂ ಹೆಚ್ಚು ರೋಗಿಗಳನ್ನು ನಗರದ ಇತರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾದಿಯಾ ಈ ಕುರಿತು ಮಾತನಾಡಿದ್ದು, ಆಸ್ಪತ್ರೆಯ ಎರಡನೇ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸುಮಾರು 20-25 ಅಗ್ನಿಶಾಮಕ ಟೆಂಡರ್‌ಗಳು ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯ ಇನ್ನು ಚಾಲ್ತಿಯಲ್ಲಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − one =
Remember me
