ಉಜ್ಜಯಿನಿ:ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನದ ಗರ್ಭಗುಡಿಯಲ್ಲಿ ಸೋಮವಾರ ಬೆಳಗ್ಗೆ ಭಸ್ಮಾರತಿ ವೇಳೆ ಅರ್ಚಕ ಸೇರಿ 13 ಮಂದಿಗೆ ಬೆಂಕಿ ತಗಲಿದೆ. ಹೋಳಿ ಹಬ್ಬದ ಕಾರಣ, ದೇವಾಲಯದಲ್ಲಿ ಬಣ್ಣ ಎಸೆಯಲಾಗುತ್ತಿತ್ತು, ಇದರಿಂದಾಗಿ ಬೆಂಕಿ ವ್ಯಾಪಿಸಿತು. ಈ ಬೆಂಕಿ ಹನ್ನೆರಡಕ್ಕಿಂತಲೂ ಹೆಚ್ಚು ಪುರೋಹಿತರು ಮತ್ತು ಸೇವಕರಿಗೆ ತಗಲಿದೆ.
ಅವಘಡದಲ್ಲಿ ಗಾಯಗೊಂಡ ಜನರೆಲ್ಲರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. “ಘಟನೆಯ ವೇಳೆ ಇಲ್ಲಿ ಹೋಳಿ ಆಚರಣೆ ನಡೆಯುತ್ತಿತ್ತು. ಗರ್ಭಗುಡಿಯಲ್ಲಿ ಭಸ್ಮಾರತಿ ವೇಳೆ ಅಗ್ನಿ ಅವಘಡ ಸಂಭವಿಸಿದೆ” ಎಂದು ಜಿಲ್ಲಾಧಿಕಾರಿ ನೀರಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಕಾಲದಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಗಿದೆ.
ದೇವಸ್ಥಾನದಲ್ಲಿ ಭಸ್ಮಾರತಿಯ ಪ್ರಧಾನ ಅರ್ಚಕ ಸಂಜಯ್ ಗುರು, ವಿಕಾಸ್ ಪೂಜಾರಿ, ಮನೋಜ್ ಪೂಜಾರಿ, ಅಂಶ್ ಪುರೋಹಿತ್, ಸೇವಕ ಮಹೇಶ್ ಶರ್ಮಾ, ಚಿಂತಾಮನ್ ಗೆಹ್ಲೋಟ್ ಮತ್ತಿತರರು ಗಾಯಗೊಂಡಿದ್ದಾರೆ. ಗರ್ಭಗುಡಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಲ್ಲಿದ್ದ ಭಕ್ತರ ನಡುವೆ ನೂಕುನುಗ್ಗಲು ಉಂಟಾಯಿತು. ಇದಾದ ಬಳಿಕ ಕೂಡಲೇ ಜಿಲ್ಲಾಸ್ಪತ್ರೆಯಿಂದ ಆಂಬ್ಯುಲೆನ್ಸ್ ಕರೆಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.
ಈ ದುರ್ಘಟನೆಯಲ್ಲಿ ಸಿಎಂ ಮೋಹನ್ ಯಾದವ್ ಪುತ್ರ ಹಾಗೂ ಪುತ್ರಿ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಅವರು ಇದ್ದರು.
ಅರ್ಚಕ ಆಶಿಶ್ ಶರ್ಮಾ ಮಾತನಾಡಿ, ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಹೋಳಿ ಆಚರಣೆ ಆಯೋಜಿಸಲಾಗಿತ್ತು. ಬಣ್ಣದಿಂದಾಗಿ ಗರ್ಭಗುಡಿಯಲ್ಲಿ ಬೆಂಕಿ ವ್ಯಾಪಿಸಿತು. ಘಟನೆಯಲ್ಲಿ ದೇವಸ್ಥಾನದ ಅರ್ಚಕ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದರು.
ಮೊಬೈಲ್ ಸ್ಫೋಟಗೊಂಡು ನಾಲ್ವರು ಮಕ್ಕಳು ಸಜೀವ ದಹನ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 − ten =
Remember me
