ನವದೆಹಲಿ:ಮಂಗಳವಾರ ಅಸ್ಸಾಂ-ಮೇಘಾಲಯದ ಗಡಿಯಲ್ಲಿರುವ ಮುಕ್ರೋಹ್ ಪ್ರದೇಶದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಮೇಘಾಲಯದ ಐವರು ಮತ್ತು ಅಸ್ಸಾಂ ಫಾರೆಸ್ಟ್ ಗಾರ್ಡ್‌ನ ಒಬ್ಬರು ಸೇರಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೇಘಾಲಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಈ ಬಗ್ಗೆ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮಾತನಾಡಿದ್ದು ‘ ಮುಕೋದಲ್ಲಿ ಗುಂಡಿನ ದಾಳಿಯ ಘಟನೆಯ ನಂತರ ನವೆಂಬರ್ 22 ರಿಂದ ಏಳು ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ ಮೊಬೈಲ್ ಇಂಟರ್​ನೆಟ್​ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಸ್ಸಾಂ ಮುಖ್ಯಮಂತ್ರಿ ‘ಪಶ್ಚಿಮ ಜೈಂತಿಯಾ ಹಿಲ್ಸ್ ಜಿಲ್ಲೆಯ ಮುಕ್ರೋಹ್ ಗ್ರಾಮದಲ್ಲಿ ಸಂಭವಿಸಿದ ಅಹಿತಕರ ಘಟನೆಯಲ್ಲಿ, ಅಸ್ಸಾಂ ಪೊಲೀಸರು ಮತ್ತು ಅಸ್ಸಾಂ ಅರಣ್ಯ ರಕ್ಷಕರ ಗುಂಡಿನ ದಾಳಿಯಿಂದ 6 ಜನರು ಸಾವನ್ನಪ್ಪಿದ್ದಾರೆ. 6 ಜನರಲ್ಲಿ ಐವರು ಮೇಘಾಲಯದ ನಿವಾಸಿಗಳು ಮತ್ತು ಒಬ್ಬರು ಅಸ್ಸಾಂ ಫಾರೆಸ್ಟ್ ಗಾರ್ಡ್‌ನವರಾಗಿದ್ದರೆ’ ಎಂದು ತಮ್ಮ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.
In an unfortunate incident that occurred at Mukroh village in West Jaiñtia Hills District, 6 persons died due to firing by Assam Police and Assam Forest Guards.Out of the 6, 5 were Meghalaya residents & 1 is from the Assam Forest Guard@narendramodi@AmitShah@himantabiswapic.twitter.com/KVZSYMksCz— Conrad Sangma (@SangmaConrad)November 22, 2022
In an unfortunate incident that occurred at Mukroh village in West Jaiñtia Hills District, 6 persons died due to firing by Assam Police and Assam Forest Guards.Out of the 6, 5 were Meghalaya residents & 1 is from the Assam Forest Guard@narendramodi@AmitShah@himantabiswapic.twitter.com/KVZSYMksCz
ವರದಿಗಳ ಪ್ರಕಾರ ಅಸ್ಸಾಂ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಸ್ಸಾಂ ಪೊಲೀಸರು ಅಕ್ರಮವಾಗಿ ಮರ ಸಾಗಿಸುತ್ತಿದ್ದ ವಾಹನವನ್ನು ಹಿಂಬಾಲಿಸಿ ಬಂಧಿಸಿದೆ. ಈ ಸುದ್ದಿ ತಿಳಿಯುತ್ತಿದ್ದಂತೆಯೆ ಮುಕ್ರೋಹ್ ಹಳ್ಳಿಯ ಜನರು ಅಸ್ಸಾಂನ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸುತ್ತುವರೆದಿದ್ದಾರೆ. ಈ ಸಂದರ್ಭ ಅಸ್ಸಾಂ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಗುಂಡು ಹಾರಿಸಿದ್ದು ಐದು ಜನರು ಮೃತಪಟ್ಟಿದ್ದಾರೆ. ನಂತರ ನಡೆದ ಸಂಘರ್ಷದಲ್ಲಿ ಓರ್ವ ಅಸ್ಸಾಂ ಫಾರೆಸ್ಟ್ ಗಾರ್ಡ್‌ ಕೂಡ ನಿಧನರಾಗಿದ್ದಾರೆ.(ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 1 =
Remember me
