ನವ ದೆಹಲಿ:ನಮೀಬಿಯಾದಿಂದ ಭಾರತಕ್ಕೆ ಬರಲಿರುವ ಚೀತಾಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಟ್ಟು 8 ಚೀತಾಗಳು ಭಾರತಕ್ಕೆ ಬರಲಿದೆ. ಹರಿದಾಡುತ್ತಿರುವ ವಿಡಿಯೋದಲ್ಲಿ 2 ಚೀತಾಗಳು ಮರದಡಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವುದು ಕಾಣುತ್ತಿದೆ.
ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ನಬೀಬಿಯಾದಿಂದ ಚೀತಾಗಳನ್ನು ಕರೆತರಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ (ಸೆ.17) ಜನ್ಮದಿನದಂದು ಚೀತಾಗಳನ್ನು ರಾಷ್ಟ್ರೀಯ ಉದ್ಯಾನವನಕ್ಕೆ ಅರ್ಪಿಸಲಿದ್ದಾರೆ.
ಹಿನ್ನೆಲೆ:ಭಾರತದಲ್ಲಿ ಚೀತಾಗಳ ಸಂಖ್ಯೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ನಮೀಬಿಯಾ ದೇಶದಿಂದ ಚೀತಾಗಳನ್ನು ಕರೆತರಲಾಗುತ್ತಿದೆ. ಇದಕ್ಕಾಗಿ ನಮೀಬಿಯಾ ದೇಶದಿಂದ ಚೀತಾಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಲಾಗಿತ್ತು. ಈ ಪ್ರಯತ್ನದ ಫಲವಾಗಿ ಇದೀಗ ಭಾರತಕ್ಕೆ ಮೊದಲ ಹಂತದಲ್ಲಿ 8 ಚೀತಾಗಳು ಬರುತ್ತಿವೆ.
5 ಗಂಡು ಹಾಗೂ 3 ಹೆಣ್ಣು ಚೀತಾಗಳು ನಮೀಬಿಯಾದಿಂದ ಭಾರತಕ್ಕೆ ಬರುತ್ತಿದೆ. ಸೆ.17 ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಜನ್ಮ ದಿನದ ಸಂದರ್ಭದಲ್ಲಿ ಈ ಚೀತಾಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಅರ್ಪಿಸಲಿದ್ದಾರೆ.
ಚಿರತೆ ಕರೆತರಲು ವಿಶೇಷ ವಿಮಾನನಮೀಬಿಯಾದಿಂದ ಚೀತಾಗಳನ್ನು ಕರೆತರಲು ವಿಶೇಷ ವಿಮಾನವನ್ನು ಸಜ್ಜುಗೊಳಿಸಲಾಗಿತ್ತು. ಇದಕ್ಕಾಗಿ ವಿಮಾನದ ಮುಂಭಾಗದಲ್ಲಿ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯ ಚಿತ್ರವಿರುವ ವಿಮಾನ ನಮೀಬಿಯಾ ದೇಶಕ್ಕೆ ತೆರಳಿತ್ತು. ಈ ವಿಶೇಷ ವಿಮಾನದ ಚಿತ್ರವನ್ನು ನಮೀಬಿಯಾದಲ್ಲಿರುವ ಭಾರತದ ಹೈ ಕಮಿಷನ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿತ್ತು.(ಏಜೆನ್ಸೀಸ್)
#WATCH| First look of Cheetahs that will be brought from Namibia to India on 17th September at KUNO National Park, in Madhya Pradeshpic.twitter.com/HOjexYWtE6— ANI (@ANI)September 16, 2022
#WATCH| First look of Cheetahs that will be brought from Namibia to India on 17th September at KUNO National Park, in Madhya Pradeshpic.twitter.com/HOjexYWtE6
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
