ಮುಂಬೈ:ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಶುಕ್ರವಾರ(ಆಗಸ್ಟ್​​​ 30) ಕ್ಷಮೆಯಾಚಿಸಿದ್ದಾರೆ.
ಇದನ್ನು ಓದಿ:ಲೈಂಗಿಕ ದೌರ್ಜನ್ಯ ಪ್ರಕರಣದಡಿ ಈ ನಟನ ವಿರುದ್ಧ ಎರಡನೇ ಎಫ್​​ಐಆರ್​ ದಾಖಲು; ಪೊಲೀಸರು ಹೇಳಿದಿಷ್ಟು
ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಕೇವಲ ಹೆಸರಲ್ಲ, ಅವರು ನಮ್ಮ ಆರಾಧ್ಯ ದೈವ. ನಾನು ನನ್ನ ದೇವರು ಛತ್ರಪತಿ ಶಿವಾಜಿ ಮಹಾರಾಜರಲ್ಲಿ ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ಭಾರತ ಮಾತೆಯ ಮಹಾನ್ ಮಗ, ಈ ನೆಲದ ಮಗ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಮತ್ತು ಅವಮಾನಿಸುವವರು ನಾವಲ್ಲ, ಅವರು ಕ್ಷಮೆ ಕೇಳಲು ಸಿದ್ಧರಿಲ್ಲ, ನ್ಯಾಯಾಲಯದ ಮೊರೆ ಹೋಗಿ ಹೋರಾಟಕ್ಕೆ ಸಿದ್ಧರಿದ್ದಾರೆ ಎಂದು ಹೇಳಿದರು.
ಬಿಜೆಪಿ ನನ್ನನ್ನು 2013ರಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಹೆಸರಿಸಿತ್ತು. ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಭಕ್ತನಾಗಿ ಕುಳಿತು ಹೊಸ ಪ್ರಯಾಣವನ್ನು ಪ್ರಾರಂಭಿಸಿದ್ದಾಗಿ ತಿಳಿಸಿದರು.
#WATCH| Palghar, Maharashtra: PM Narendra Modi speaks on the Chhatrapati Shivaji Maharaj's statue collapse incident in MalvanHe says, "…Chhatrapati Shivaji Maharaj is not just a name for us… today I bow my head and apologise to my god Chhatrapati Shivaji Maharaj. Our…pic.twitter.com/JhyamXj91h
ಕಡಲ ರಕ್ಷಣೆ ಮತ್ತು ಭದ್ರತೆಯಲ್ಲಿ, ಮರಾಠ ನೌಕಾಪಡೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಪರಂಪರೆಯನ್ನು ಗೌರವಿಸುವ ಉದ್ದೇಶದಿಂದ ಮೊದಲ ಬಾರಿಗೆ ಸಿಂಧುದುರ್ಗದಲ್ಲಿ ನಡೆದ ನೌಕಾಪಡೆಯ ದಿನಾಚರಣೆಯ ಅಂಗವಾಗಿ ಕಳೆದ ವರ್ಷ ಡಿಸೆಂಬರ್​​ 4ರಂದು ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಮರಾಠ ಯೋಧ ಛತ್ರಪತಿ ಶಿವಾಜಿ ಮಹಾರಾಜರ 35 ಅಡಿ ಎತ್ತರದ ಪ್ರತಿಮೆ ಕುಸಿದ ಬಳಿಕ ಪ್ರತಿಪಕ್ಷಗಳು ಬಿಜೆಪಿಯನ್ನು ಗುರಿಯಾಗಿಸಿ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. (ಏಜೆನ್ಸೀಸ್​​)
ಟ್ರೈನಿ ವೈದ್ಯೆ ಹತ್ಯೆ ಕೇಸ್; ಘಟನೆ ನಡೆದ ದಿನದ ಫೋನ್​ ಕಾಲ್​ ವೈರಲ್​​.. ಸಂತ್ರಸ್ತೆ ತಂದೆ ಹೇಳಿದಿಷ್ಟು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eighteen =
Remember me
