ಅಯೋಧ್ಯೆ:ದೇಶದ ಜನತೆಗೆ ಇದುವರೆಗೂ ಕಾತರದಿಂದ ಎದುರು ನೋಡುತ್ತಿದ್ದ ಆ ಕ್ಷಣ ಬಂದೇ ಬಿಟ್ಟಿದೆ. ಹೌದು, ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾದ ವಿಧಿ-ವಿಧಾನಗಳು ನೇರವೇರಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಐತಿಹಾಸಿಕ ಸಮಾರಂಭ ನಡೆಯುತ್ತಿದ್ದು, ದೇಶದ ಸಾಕಷ್ಟು ಗಣ್ಯರು ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಅಲ್ಲದೆ, ರಾಮಲಲ್ಲಾನ ಮೊದಲ ನೋಟದ ವಿಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗುತ್ತಿದೆ. ಮಂದಹಾಸ ಬೀರುತ್ತಿರುವ ರಾಮನ ವಿಗ್ರಹ ನೋಡಿದವರು ಭಕ್ತಿಯಲ್ಲಿ ಭಾವಪರವಶವಾಗುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಮ್ಮುಖದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಿತು. ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಯೋಗಿ ಆದಿತ್ಯನಾಥ್ ಸಹ ಪ್ರಾಣ ಪ್ರತಿಷ್ಠಾದಲ್ಲಿ ಭಾಗಿಯಾಗಿದ್ದಾರೆ.
ಗರ್ಭಗುಡಿಯಲ್ಲಿ ನೆಲೆ ನಿಂತಿರುವ ಬಾಲರಾಮ ಅಥವಾ ರಾಮಲಲ್ಲಾ ಹೂವಿನ ಹಾರ ಮತ್ತು ಒಡವೆಗಳಿಂದ ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.
#WATCH| Ram Lalla idol at the Shri Ram Janmaboomi Temple in Ayodhya#RamMandirPranPrathisthapic.twitter.com/QOW51jbt5L
— ANI (@ANI)January 22, 2024

ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ರಾಮ ಲಲ್ಲಾನ ವಿಗ್ರಹವನ್ನು ಅನಾವರಣಗೊಳಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ನೂತನವಾಗಿ ಅನಾವರಣಗೊಂಡ ವಿಗ್ರಹಕ್ಕೆ ಪೂಜೆ ಸಲ್ಲಿಸಿದರು. ಪ್ರಧಾನಿ ಮೋದಿ ಅವರು ರಾಮಲಲ್ಲಾ ಮೂರ್ತಿಯ ಪಾದಗಳಿಗೆ ಕಮಲದ ಹೂವನ್ನು ಅರ್ಪಿಸಿದರು.
ವಿಷ್ಣು ದೇವರ ಪ್ರಾರ್ಥನೆಯೊಂದಿಗೆ ಆರಂಭಪ್ರಾಣ ಪ್ರತಿಷ್ಠಾ ಸಮಾರಂಭವು ವಿಷ್ಣು ದೇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪುರೋಹಿತರು ಶ್ರೀರಾಮನ ಸನ್ನಿಧಿಯಲ್ಲಿ ಮಂತ್ರಗಳನ್ನು ಪಠಿಸಿದರು. ವಿಶೇಷ 84 ಸೆಕೆಂಡುಗಳ ಮಂಗಳಕರ ‘ಮಹೂರ್ತ’ ಸಮಯದಲ್ಲಿ, ರಾಮಲಲ್ಲಾ ವಿಗ್ರಹವನ್ನು ಅನಾವರಣಗೊಳಿಸಲಾಯಿತು.
ಮೂರು ಮಹಡಿಗಳನ್ನು ಹೊಂದಿರುವ ಅಯೋಧ್ಯೆ ರಾಮ ಮಂದಿರ ವಿನ್ಯಾಸದ A to Z ವಿವರ ಇಲ್ಲಿದೆ…

ಮೆಕ್ಸಿಕೋದಲ್ಲೂ ಶ್ರೀರಾಮ ಪ್ರಾಣ ಪ್ರತಿಷ್ಠೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 13 =
Remember me
