ಲಖನೌ:ಅಂಗಡಿಯೊಳಗೆ ನುಗ್ಗಿದ ಮಹಿಳೆಯರು ಅಂಗಡಿ ಮಾಲೀಕನಿಗೆ ಚಪ್ಪಲಿ ಏಟು ಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ. ಈ ರೀತಿಯ ಹಲ್ಲೆ ನಡೆಸಿದವರು ಆತನ ಹೆಂಡತಿಯೇ ಎಂದು ಹೇಳಲಾಗಿದೆ.
ಫಿರೋಜಾಬಾದ್‌ನ ಶಿಕೋಹಾಬಾದ್ ನಗರದ ಅಂಗಡಿಯೊಳಗೆ ಇತ್ತೀಚೆಗೆ ಮಹಿಳೆಯರು ನುಗ್ಗಿ ಅಲ್ಲಿದ್ದ ಮಾಲೀಕನಿಗೆ ಸರಿಯಾಗಿ ಏಟು ಕೊಟ್ಟಿದ್ದಾರೆ. ಸುತ್ತ ಮುತ್ತಲಿನವರು ಅದನ್ನು ತಡೆದು ಪ್ರಶ್ನಿಸಿದಾಗ ಅದರಲ್ಲಿದ್ದ ಮಹಿಳೆ ತನ್ನ ಕಥೆಯನ್ನು ಹೇಳಿದ್ದಾಳೆ. 2012ರಲ್ಲೇ ನಮ್ಮಿಬ್ಬರ ಮದುವೆಯಾಗಿದೆ. ಆದರೆ 2013ರಲ್ಲಿ ಆತ ನನಗೆ ಸಾಕಷ್ಟು ಹಿಂಸೆ ಕೊಟ್ಟು ಮನೆಯಿಂದ ಹೊರ ಹಾಕಿದ. ನಮ್ಮಿಬ್ಬರ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ ಇದೀಗ ಈತ ಬೇರೊಂದು ಹಳ್ಳಿಗೆ ಹೋಗಿ ಮತ್ತೊಂದು ಮದುವೆ ಮಾಡಿಕೊಂಡು ಬಂದಿದ್ದಾನೆ ಎಂದು ಆಕೆ ದೂರಿದ್ದಾಳೆ.
ಆರೋಪಿ ಸ್ಥಾನದಲ್ಲಿರುವ ವ್ಯಕ್ತಿ ಮೇ 14ರಂದು ಮತ್ತೊಂದು ಮದುವೆಯಾಗಿರುವುದಾಗಿ ಹೇಳಲಾಗಿದೆ. ಮೊದಲನೇ ಹೆಂಡತಿ ಇರುವಾಗಲೇ, ಆಕೆಗೆ ಮೋಸ ಮಾಡಿದ ಎನ್ನುವ ಕಾರಣಕ್ಕೆ ಆತನ ಮೊದಲನೇ ಹೆಂಡತಿ ಸೇರಿ ಅನೇಕ ಮಹಿಳೆಯರು ಆತನಿಗೆ ಸರಿಯಾಗಿ ಏಟು ಕೊಟ್ಟಿದ್ದಾರೆ. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಇಬ್ಬರನ್ನೂ ಕೂರಿಸಿ, ರಾಜಿ ಮಾಡುವುದಾಗಿ ಪೊಲೀಸರು ಹೇಳಿದ್ದಾರೆ. (ಏಜೆನ್ಸೀಸ್)
ಪರಿಸರ ಮಾಲಿನ್ಯದಿಂದ ಗಂಡಸರಲ್ಲಿ ವೀರ್ಯಾಣು ಉತ್ಪತ್ತಿ ಪ್ರಮಾಣ ಕುಸಿತ!

ಮಗ ಎಂದುಕೊಂಡಿದ್ದವ ನನ್ನ ಚಿಕ್ಕಪ್ಪನಾದ! ಅಜ್ಜನ ಜತೆ ತನ್ನ ಗರ್ಲ್​ಫ್ರೆಂಡ್​ ಆಡುತ್ತಿದ್ದ ಆಟವನ್ನು ಬಿಚ್ಚಿಟ್ಟ ಯುವಕ!

ವರ್ಜಿನಿಟಿ ಕಳೆದುಕೊಳ್ಳಲು ಸರಿಯಾದ ವಯಸ್ಸು ಯಾವುದು? ಅಮ್ಮನಿಗೇ ಪ್ರಶ್ನಿಸಿದ ಆಲಿಯಾ ಕಶ್ಯಪ್

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:20 − 12 =
Remember me
