ಮುಂಬೈ:ಭಾರೀ ಮಳೆಯಿಂದಾಗಿ ಮುಂಬೈ ಜಲಾವೃತಗೊಂಡಿದೆ. ನಿರಂತರ ಮಳೆಯಿಂದಾಗಿ ಮುಂಬೈನ ಹಲವು ರಸ್ತೆಗಳು ಕೊಳಗಳಂತೆ ಕಾಣುತ್ತಿವೆ.  ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಯಗಡದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಮುಂಬೈನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಮುಂಬೈ ಮತ್ತು ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳು ಮತ್ತು ರೈಲು ಹಳಿಗಳಿಗೆ ಮಳೆ ನೀರು ಬಂದಿದೆ. ಭಾರೀ ಮಳೆಯಿಂದಾಗಿ, ಅನೇಕ ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಅಂಧೇರಿ ರೈಲು ನಿಲ್ದಾಣದ ವ್ಯಾಪ್ತಿಯ ರೈಲು ಹಳಿಗಳಿಗೆ ಮಳೆ ನೀರು ನುಗ್ಗಿದ್ದರಿಂದ ಆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ರೈಲು ಹಳಿಗಳ ನಡುವೆ ನೀರು ನಿಂತಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೀನುಗಳು ನೀರಿಗೆ ನುಗ್ಗಿವೆ.
Fishes on a railway track in Mumbai after flooding due to heavy rainspic.twitter.com/1nNl3sb0ik
— PrzemekSkyMan❇️ (@Przemek87394560)July 9, 2024

ರೈಲು ಹಳಿಗಳ ಮೇಲೆ ನಿಂತಿದ್ದ ನೀರಿನಲ್ಲಿ ಮೀನುಗಳು ಈಜುತ್ತಿರುವುದನ್ನು ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ವಿಡಿಯೋಗಳನ್ನು ನೋಡಿದ ನೆಟಿಜನ್‌ಗಳು ತಮ್ಮದೇ ಶೈಲಿಯಲ್ಲಿ ತಮಾಷೆಯ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 4 =
Remember me
