ಉತ್ತರಪ್ರದೇಶ:AC ಇಲ್ಲದೆ ಆಸ್ಪತ್ರೆಯ ಕೊಠಡಿಯಲ್ಲಿ ತಮ್ಮ ಮಗಳಿಗೆ ಹೆರಿಗೆ ಮಾಡಿಸಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬಸ್ಥರು ಉತ್ತರಪ್ರದೇಶದ ಬಾರಾಬಂಕಿ ಎಂಬ ಪ್ರದೇಶದಲ್ಲಿ ಅಳಿಯನ ಕುಟುಂಬಸ್ಥರಿಗೆ ಥಳಿಸಿದ್ದಾರೆ.
ಇದನ್ನೂ ಓದಿ:ಉತ್ತರಪ್ರದೇಶದಲ್ಲಿ ಈಗ ಪರಿಸ್ಥಿತಿ ಬದಲಾಗಿದೆ, ಯಾರಾದರೂ ಹೆದರಿಸಲು ಸಾಧ್ಯವೇ?: ಯೋಗಿ ಆದಿತ್ಯನಾಥ್​
AC ವಿಚಾರಕ್ಕೆ ಆಕ್ರೋಶಗೊಂಡ ಯುವತಿಯ ತವರು ಮನೆಯವರು ಆಕೆಯ ಗಂಡನ ತಂದೆ-ತಾಯಿ ಮತ್ತು ಸಹೋದರಿಯರನ್ನು ಥಳಿಸಿದ್ದಾರೆ. ಇದು ಎರಡು ಗುಂಪಿನ ನಡುವೆ ಪೂರ್ಣ ಪ್ರಮಾಣದ ಜಗಳಕ್ಕೆ ಕಾರಣವಾಯಿತು. ಈ ಹೊಡೆದಾಟವನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದ್ದು, ಜನರು ಒಬ್ಬರಿಗೊಬ್ಬರು ಕಪಾಳಮೋಕ್ಷ ಮಾಡುತ್ತಿರುವುದು ಕಂಡು ಬಂದಿದೆ.
ಹೆರಿಗೆಗೆಂದು ತಮ್ಮ ಸೊಸೆಯನ್ನು ಬಾರಾಬಂಕಿಯ ಸಿವಿಲ್ ಲೈನ್ಸ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಈ ಕುಟುಂಬ ದಾಖಲಿಸಿತ್ತು. ಹೆರಿಗೆಗೆ ಸಂಬಂಧಿಸಿದ ಎಲ್ಲ ವೆಚ್ಚವನ್ನು ತಾವೇ ಭರಿಸಿರುವುದಾಗಿ ಮಹಿಳೆಯ ಮಾವ ರಾಮ್‌ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ:ಸದ್ಗುರು ಮಣ್ಣು ರಕ್ಷಿಸಿ ಅಭಿಯಾನಕ್ಕೆ ಕೈಜೋಡಿಸಿದ ಉತ್ತರಪ್ರದೇಶ; ಈಶ ಔಟ್​ರೀಚ್​ ಒಪ್ಪಂದಕ್ಕೆ ಸಹಿ..
ಆದರೆ, ಹುಡುಗಿಯ ಪೋಷಕರು ಮತ್ತು ಸಂಬಂಧಿಕರು ತಮ್ಮ ಮಗಳನ್ನು ಭೇಟಿ ಮಾಡಲು ಆಸ್ಪತ್ರೆಗೆ ಬಂದಾಗ, ಅವರು ಹವಾನಿಯಂತ್ರಿತ ಕೊಠಡಿ ವ್ಯವಸ್ಥೆ ಮಾಡಲಿಲ್ಲ ಎಂದು ಕಾರಣ ನೀಡಿ ರಾಮ್​ಕುಮಾರ್​ರನ್ನು ನಿಂದಿಸಲು ಪ್ರಾರಂಭಿಸಿದರು. ಅವರು ಮರುಪ್ರಶ್ನೆ ಮಾಡಿದಾಗ, ಜಗಳ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fourteen =
Remember me
