ಚೆನ್ನೈ:ನಕಲಿ ಮದ್ಯ ಸೇವಿಸಿದ ಕಾರಣ ಓರ್ವ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದಿದೆ.
ಘಟನೆ ಸಂಬಂಧ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ ಸಿಎಂ ಸ್ಟಾಲಿನ್ ಆದೇಶ ಹೊರಡಿಸಿದ್ದಾರೆ.
ಮೃತ ಐವರು ನಕಲಿ ಮದ್ಯ ಸೇವಿಸಿದ ಕಾರಣ ಶನಿವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮೂವರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.
ಭಾನುವಾರ ಸಮಜೆ ಮಹಿಳೆ ಸೇರಿದಂತೆ ಇನ್ನಿಬ್ಬರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದ್ದು ಪ್ರಕರಣ ಸಂಬಂಧ ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆ ಇದೆಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ಧಾರೆ.
ಇದನ್ನೂ ಓದಿ:ಕರ್ನಾಟಕದ ಜನತೆ ಕಾಂಗ್ರೆಸ್​ಗೆ ಮತ ಮಾರಿಕೊಂಡಿದ್ದಾರೆ: ​ಉಚ್ಛಾಟಿತ ಬಿಜೆಪಿ ಶಾಸಕ ರಾಜಾ ಸಿಂಗ್​
ಈ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್​ ನಕಲಿ ಮದ್ಯ ಹಾಗೂ ಡ್ರಗ್ಸ್​ ನಿರ್ಮೂಲನೆಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು ಘಟನೆ ಸಂಬಂಧ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರದ ವತಿಯಿಂದ ಕೊಡಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
