ಚೆನ್ನೈ:ಪೆಟ್ರೋಲ್​ ಟ್ಯಾಂಕರ್​ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಪ್ಪೂರಿನ ಧಾರಾಪುರಂನಲ್ಲಿ ನಡೆದಿದೆ.
ಮೃತರನ್ನು ಬಾಲಕೃಷ್ಣನ್ (78), ಸೆಲ್ವರಾಣಿ (70), ತಮಿಳುಮಣಿ (51), ಕಲಾರಾಣಿ (50), ಚಿತ್ರಾ (49) ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಿಂಡಿಗಲ್​ನ ಪಳನಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
திருப்பூர் மாவட்டம் தாராபுரத்தில் சாலை விபத்தில் உயிரிழந்தவர்களின் குடும்பத்தினருக்கு ஆறுதல் மற்றும் நிதியுதவியை மாண்புமிகு முதலமைச்சர்@mkstalinஅவர்கள் அறிவித்துள்ளார்.pic.twitter.com/Tdgfq1tw4I
ಇದನ್ನೂ ಓದಿ:ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಧಕ್ ಧಕ್ ಗರ್ಲ್; ಈ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಮಾಧುರಿ ದೀಕ್ಷಿತ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪಳನಿಯಲ್ಲಿ ಮದುವೆ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಕಾರು ಆಲಂಕಾಡು ಬಳಿ ತಲುಪಿದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಪೆಟ್ರೋಲ್​ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ತಮಿಳುಮಣಿ, ಬಾಲಕೃಷ್ಣನ್, ಸೆಲ್ವರಾಣಿ, ಚಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕಲಾರಾಣಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 9 =
Remember me
