– ಟ್ರಕ್ ಚಾಲಕ ಮದ್ಯದ ಅಮಲಿನಲ್ಲಿದ್ದ ಎಂದು ಶಂಕಿಸಿದ ಪೊಲೀಸರುಹೈದರಾಬಾದ್: ಟ್ರಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ವರ್ಧನ್ನಪೇಟೆ ಮಂಡಲದ ಯೆಲ್ಲಂಡ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಐವರು ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ..ಮತ್ತಷ್ಟು ಇಳಿಕೆಯಾಯ್ತು ಚಿನ್ನ, ಬೆಳ್ಳಿ ದರ
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.ಪೊಲೀಸರ ಪ್ರಕಾರ, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಐದನೆಯವರು ಆಸ್ಪತ್ರೆಯಲ್ಲಿ ಅಸುನೀಗಿದರು. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಆಟೊರಿಕ್ಷಾ ವಾರಂಗಲ್‌ನಿಂದ ತೊರ್ರೂರ್‌ಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ಮದ್ಯ ಸೇವಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ರಾಜಸ್ಥಾನ ಮೂಲದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮೃತರು ಮತ್ತು ಗಾಯಾಳುಗಳು ಜೇನು ಮಾರಾಟದಲ್ಲಿ ತೊಡಗಿದ್ದರು.
ಗೆಳೆಯ ರಿಚರ್ಡ್​ ಜತೆ ಮೊದಲು… ಯೂಟ್ಯೂಬ್​ ಸಂದರ್ಶನದಲ್ಲಿ ಲೈಂಗಿಕತೆ ಬಗ್ಗೆ ಶಕೀಲಾ ಮುಕ್ತ ಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
