ಬಿಹಾರ:ಬಿಹಾರದ ಗೋಲ್ಡ್ ಮ್ಯಾನ್ ಎಂದು ಕರೆಯಲ್ಪಡುವ ಪ್ರೇಮ್ ಸಿಂಗ್ ಅವರು ತಮ್ಮ ಚಿನ್ನದ ಪ್ರೀತಿಯಿಂದ ಗಮನಾರ್ಹ ವ್ಯಕ್ತಿಯಾಗಿದ್ದಾರೆ. ಅವರು ತಮ್ಮ ದೇಹದ ಮೇಲೆ ಸುಮಾರು ಐದು ಕಿಲೋಗ್ರಾಂಗಳಷ್ಟು ಮತ್ತು 400 ಗ್ರಾಂ ಚಿನ್ನ ಧರಿಸುವುದರ ಜತೆಗೆ ಬೈಕ್​ ಕೂಡಾ ಬಂಗಾರದ್ದೆ ಆಗಿದೆ. ಇದು ವಿಚಿತ್ರ ಎಂದು ನಿಮಗೆ ಎನ್ನಿಸಿದ್ರೂ ಖಂಡಿತಾ ಸತ್ಯ. ಈ ಕುರಿತಾದ ಸುದ್ದಿ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ಪ್ರೇಮ್ ಸಿಂಗ್ ಈಗ ತಮ್ಮ ಬೈಕಿಗೂ ಚಿನ್ನ ತೊಡಿಸಿ ಸುದ್ದಿಯಾಗಿದ್ದಾರೆ. ಇವರ ಬೈಕಿನ ಕೆಲ ಭಾಗಗಳು ಚಿನ್ನದ್ದಾಗಿವೆ. ಇದನ್ನು ಬೆಂಗಳೂರಿನಲ್ಲಿ ಮಾಡಿಸಲಾಗಿದೆ ಎನ್ನಲಾಗಿದೆ.  ಸುಮಾರು ಏಳರಿಂದ ಎಂಟು ತಿಂಗಳ ಅವಧಿಯಲ್ಲಿ ಈ ಬಂಗಾರದ ಬೈಕ್ ತಯಾರಾಗಿದೆ. ಇದರ ಬೆಲೆ 11ರಿಂದ 12 ಲಕ್ಷ ರೂ. ಎನ್ನಲಾಗಿದೆ.
#WATCH| Patna, Bihar: Prem Singh popularly known as 'Goldman' of Bihar for his hobby of wearing gold jewellery worth crores, rode a bike made up of gold.
He says, "…The people of Bihar and India call me 'Goldman'… Currently, I am wearing more than 5 kg of gold. There is…pic.twitter.com/GW0pfqUVF8
— ANI (@ANI)June 29, 2024

ಸ್ವರ್ಣದ ಮೇಲಿನ ಮೋಹದಿಂದಾಗಿ ಪ್ರೇಮ್ ಸಿಂಗ್‌ ಬಿಹಾರದ ‘ಬಂಗಾರದ ಮನುಷ್ಯ’ ಎಂದೇ ಖ್ಯಾತರು. ಇವರು ತೊಡುವ ಸರ, ಬಳೆ, ಉಂಗುರಗಳು ಒಟ್ಟು ಐದು ಕೆಜಿ ತೂಗುತ್ತವೆ.  ಇವರ ಬೈಕಿನ ಕೆಲ ಭಾಗಗಳು ಚಿನ್ನದ್ದಾಗಿವೆ.
‘ನನ್ನನ್ನು ಜನ ಬಂಗಾರದ ಮನುಷ್ಯ ಎಂದು ಕರೆಯುತ್ತಾರೆ. ಬಿಹಾರದಲ್ಲಿ ಪ್ರಸ್ತುತ ಇರುವ ನಿತೀಶ್ ಕುಮಾರ್ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ. ಆದ ಕಾರಣ ನನಗೆ ಯಾವುದೇ ಭಯವಿಲ್ಲ. ನನ್ನ ಬೈಕಿನಲ್ಲಿ 150 ರಿಂದ 200 ಗ್ರಾಂ ಚಿನ್ನವಿದೆ’ ಎಂದಿರುವ ಪ್ರೇಮ್ ಸಿಂಗ್ ಇದು ಬಿಹಾರ ಸರ್ಕಾರ ಹಾಗೂ ಬಿಹಾರ ಪೊಲೀಸರ ಪಾಲಿಗೆ ಗೌರವದ ಸಂಗತಿ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 6 =
Remember me
