ಕನೌಜ್​:ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ರಸ್ತೆ ಬದಿ ಸುಮ್ಮನೇ ನಿಂತಿದ್ದ ಕಾರಿಗೆ​ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಲಾಕ್​ಡೌನ್ ಸಮಯದಲ್ಲಿ ಹಿತ್ತಲಲ್ಲಿ ಬೆಳೆದ ತರಕಾರಿ ತಿಂದವಳಿಗೆ ಕಾದಿತ್ತು ಬಿಗ್​ ಶಾಕ್​!
ಭಾನುವಾರ ಬೆಳಗ್ಗೆ ಆಗ್ರಾ-ಲಖನೌ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಸುಮಾರು 45 ಮಂದಿ ಕಾರ್ಮಿಕರನ್ನು ಹೊತ್ತು ಬಿಹಾರದ ಮಧುಬಾನಿ ಜಿಲ್ಲೆಯಿಂದ ದೆಹಲಿಗೆ ಬಸ್​ ಪ್ರಯಾಣ ಬೆಳೆಸಿತ್ತು. ಮಾರ್ಗ ಮಧ್ಯದಲ್ಲೇ ಭೀಕರ ಅಪಘಾತ ಸಂಭವಿಸಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗೌರವ್​ ಶುಕ್ಲಾ ಎಂಬುವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಎರಡು ವಾಹನಗಳು ರಸ್ತೆಯ ಮೇಲೆ ಉರುಳಿಬಿದ್ದು ಜಖಂಗೊಂಡಿವೆ. ಬಸ್​ ಚಾಲಕ ಸೇರಿದಂತೆ ಐವರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ. ಸ್ಥಳೀಯರು ಘಟನೆ ನಡೆದ ಪ್ರದೇಶಕ್ಕೆ ಆಗಮಿಸಿ ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದು, ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ತಮ್ಮನಿಗೆ ಕರೊನಾ ಸೋಂಕು ದೃಢವಾದ ಬೆನ್ನಲ್ಲೇ ನೇಣಿಗೆ ಶರಣಾದ ಅಣ್ಣ
ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.(ಏಜೆನ್ಸೀಸ್)
ಚಪ್ಪಲಿ ಹೊಲಿಯೋ ಹುಡುಗ ಎಸ್ಸೆಸ್ಸೆಲ್ಸಿ ಟಾಪರ್: ಇದು ನಿಜವಲ್ಲ, ಆದ್ರೂ ಸುಳ್ಳು ಅನಿಸುವುದೂ ಇಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
