ಸುಕ್ಮಾ:ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಐವರು ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮತ್ತೊಮ್ಮೆ ಪಾರದರ್ಶಕವಾಗಿ ನೀಟ್-ಯುಜಿ ಪರೀಕ್ಷೆ ನಡೆಸಿ: ಮಲ್ಲಿಕಾರ್ಜುನ ಖರ್ಗೆ ಆಗ್ರಹ
ಶರಣಾದ ಇಬ್ಬರ ನಕ್ಸಲರ ತಲೆ ಮೇಲೆ 3 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಆದಿವಾಸಿಗಳ ಮೇಲೆ ನಕ್ಸಲರು ನಡೆಸಿದ ದೌರ್ಜನ್ಯಗಳು ಮತ್ತು ಮಾವೋದಿಗಳ ಸಿದ್ಧಾಂತದ ನಿರಾಶೆಗೊಂಡ ಇವರು ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಹಿರಿಯ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನಕ್ಸಲಿಸಂ ನಿರ್ಮೂಲನ ನೀತಿ ಮತ್ತು ಸುಕ್ಮಾ ಪೊಲೀಸರ ಪುನರ್ವಸತಿ ಅಭಿಯಾನದಿಂದ ಪ್ರೇರಣೆಗೊಂಡು ಇವರು ಶರಣಾಗಿದ್ದಾರೆ ಎಂದು ಅವರು ಹೇಳಿದರು.
ಶರಣಾದವರಲ್ಲಿ ಕರ್ತಮ್ ಸುಕ್ಕಾ ಅಲಿಯಾಸ್ ಹದ್ಮಾ ತನ್ನ ತಲೆಯ ಮೇಲೆ 2 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಸಿಯಾಮ್ ಬದ್ರಾ ತನ್ನ ತಲೆಯ ಮೇಲೆ 1 ಲಕ್ಷ ರೂ., ಬಹುಮಾನ ಘೋಷಿಸಲಾಗಿತ್ತು. ಸಿಂದೂರಗುಡ ಕ್ರಾಂತಿಕಾರಿ ಪಕ್ಷದ ಸಮಿತಿಯ ಸದಸ್ಯ ಮಡ್ಕಂ ಹದ್ಮಾ ಬಂದೂಕು ಹಿಡಿದು ಶರಣಾದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಶರಣಾದ ನಕ್ಸಲೀಯರು ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯ ಪ್ರಕಾರ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಅವರು ಹೇಳಿದರು.
ಮೇಘಾಲಯದ ಪೂರ್ವ ಜೈನ್ತಿಯಾ ಕಾಡಿನಲ್ಲಿ ಮೃತದೇಹಗಳ ಪತ್ತೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + 17 =
Remember me
