ಶಹಜಹಾನ್‌ಪುರ:ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಶಹಜಾನ್​ಪುರದಲ್ಲಿ ನಡೆದಿದೆ.ಇದನ್ನೂ ಓದಿ:ವಿದ್ಯಾರ್ಥಿನಿ ಜತೆ ಟ್ಯೂಷನ್​ ಶಿಕ್ಷಕಿಯ ಅಕ್ರಮ ಸಂಬಂಧ: ಕಿಡ್ನಾಪ್​ ಪ್ರಕರಣಕ್ಕೆ ಸ್ಫೋಟಕ ತಿರುವುಮೃತರನ್ನು ರಘುವೀರ್(34), ಆತನ ಪತ್ನಿ ಜ್ಯೋತಿ(30), ಮಕ್ಕಳಾದ ಅಭಿ(3) ಮತ್ತು ಕೃಷ್ಣ(5) ಹಾಗೂ ಸೋದರ ಸೊಸೆ ಜೂಲಿ(36) ಎಂದು ಗುರುತಿಸಲಾಗಿದ್ದು, ಶಹಜಹಾನ್‌ಪುರ-ಲಖನೌ ರಸ್ತೆಯ ದಕ್ಷಿಣ ಪ್ರದೇಶದ ಶೇರಾ ಮೌ ಎಂಬಲ್ಲಿ ಈ ಘಟನೆ ನಡೆದಿದೆ.ಶುಕ್ರವಾರ ಮುಂಜಾನೆ ಎಲ್ಲರೂ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಸರ್ಕಲ್ ಅಧಿಕಾರಿ ತಿಳಿಸಿದ್ದು, ದ್ವಿಚಕ್ರ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದೆಯೇ ಅಥವಾ ವಾಹನಕ್ಕೆ ಡಿಕ್ಕಿಯಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.ಇದನ್ನೂ ಓದಿ:ಲಾರಿಗೆ ಮತ್ತೊಂದು ಲಾರಿ ಡಿಕ್ಕಿ; ಅಕ್ರಮವಾಗಿ ಸಾಗಿಸುತ್ತಿದ್ದ 7 ದನಗಳು ಸಾವುಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಅಪಘಾತವಾದ ಬಳಿಕ ಬೈಕ್​ನಿಂದು ಬಿದ್ದು ಅವರ ತಲೆಗೆ ಪೆಟ್ಟಾಗಿ ಮೃತಪಟ್ಟಿರಬಹುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 3 =
Remember me
