ನವದೆಹಲಿ:ಚೀನಾದಿಂದ ಎರಡು ವಿಶೇಷ ವಿಮಾನಗಳಲ್ಲಿ ಭಾರತಕ್ಕೆ ಬಂದಿಳಿದಿದ್ದ ಐವರಲ್ಲಿ ಕೊರೊನಾ ಗುಣಲಕ್ಷಣಗಳು ಕಂಡುಬಂದಿವೆ. ವಿಶೇಷ ಶಿಬಿರಗಳಲ್ಲಿದ್ದ ಇವರನ್ನು ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಶನಿವಾರ ಮತ್ತು ಭಾನುವಾರದಂದು ಚೀನಾದ ವುಹಾನ್​ನಿಂದ ಎರಡು ವಿಶೇಷ ವಿಮಾನಗಳು ಭಾರತಕ್ಕೆ ಬಂದಿಳಿದಿವೆ. ಅದರಲ್ಲಿ ಒಟ್ಟಾರೆಯಾಗಿ 647 ಜನರನ್ನು ಭಾರತಕ್ಕೆ ತಂದಿಳಿಸಲಾಗಿದೆ. ಅವರನ್ನೆಲ್ಲರನ್ನು ದೆಹಲಿಯ ಮಣಿಸರದಲ್ಲಿ ವಿಶೇಷ ಚಿಕಿತ್ಸಾ ಕೊಠಡಿಗಳಲ್ಲಿ ಇಡಲಾಗಿತ್ತು. ಚೀನಾದಿಂದ ಬರುವಾಗ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದ ಅವರಲ್ಲಿ ಕೊರೊನಾ ಲಕ್ಷಣಗಳಿರದವರನ್ನು ಮಾತ್ರವೇ ಕರೆತರಲಾಗಿತ್ತು. ಆದರೆ ಇದೀಗ ವಿಶೇಷ ಚಿಕಿತ್ಸಾ ಕೊಠಡಿಗಳಲ್ಲಿರುವವರಲ್ಲಿ ಐದು ಜನರಲ್ಲಿ ಕೊರೊನಾ ಗುಣಲಕ್ಷಣಗಳು ಕಾಣಿಸಿಕೊಂಡಿವೆ.
ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿರವವರನ್ನು ದೆಹಲಿಯ ಕ್ಯಾಂಟ್​ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಐವರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 12 =
Remember me
