ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ ಶಕರಪುರ ಪ್ರದೇಶದಲ್ಲಿದ್ದ ಐವರು ಶಂಕಿತ ಉಗ್ರರನ್ನು ವಿಶೇಷ ಪೊಲೀಸ್ ಪಡೆದ ಸೋಮವಾರ ಬಂಧಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬಂಧಿತರಲ್ಲಿ ಮೂವರು ಕಾಶ್ಮೀರದವರಾದರೆ, ಇಬ್ಬರು ಪಂಜಾಬಿನವರು. ಉಗ್ರ ಸಂಘಟನೆಯ ಹೆಸರನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.
ಖಲಿಸ್ತಾನ್ ಸಂಘಟನೆ ಜತೆಗೆ ನಂಟು ಹೊಂದಿರುವ ಈ ಶಂಕಿತರ ಬಳಿ ಶಸ್ತ್ರಾಸ್ತ್ರಗಳು ಮತ್ತು ಇತರೆ ದಾಖಲೆಗಳಿದ್ದವು. ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಗಳ ವಿಚಾರಣೆ ತೀವ್ರಗೊಳಿಸಿದ್ದಾರೆ. ಬಂಧಿತರನ್ನು ಕಾಶ್ಮೀರ ಮೂಲದ ಶಬ್ಬೀರ್ ಅಹ್ಮದ್​, ಅಯೂಬ್ ಪಠಾಣ್​, ರಿಯಾಜ್​ ಹಾಗೂ ಪಂಜಾಬ್​ ಮೂಲದ ಗುರ್ಜೀತ್ ಸಿಂಗ್​, ಸುಖ್​ದೀಪ್ ಸಿಂಗ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಎಂಎಲ್​ಸಿ ನಸೀರ್ ಅಹ್ಮದ್ ಪುತ್ರ ಫಯಾಜ್​ ಅಹ್ಮದ್ ಅರೆಸ್ಟ್
ನಾರ್ಕೋಟೆರರಿಸಂನಲ್ಲಿ ಈ ಗುಂಪಿಗೆ ಪಾಕಿಸ್ತಾನದ ಐಎಸ್​ಐ ಬೆಂಬಲವಿದೆ. ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಶಂಕಿತ ಐವರು ಉಗ್ರರು ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದರು. ಕೂಡಲೇ ಪ್ರತಿದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಪ್ರಮೋದ್ ಸಿಂಗ್ ಕುಶ್ವಾಹ್ ತಿಳಿಸಿದ್ದಾರೆ. (ಏಜೆನ್ಸೀಸ್)
ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆ: 9 ರಲ್ಲಿ 6 ಸ್ಥಾನ ಗೆದ್ದ ಬಿಜೆಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − seventeen =
Remember me
