ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸುಗೂ ಪ್ರದೇಶದಲ್ಲಿ ಬುಧವಾರ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಐವರು ಉಗ್ರರು ಭದ್ರತಾ ಪಡೆಯ ಗುಂಡೇಟು ತಗುಲಿ ಮೃತಪಟ್ಟಿದ್ದಾರೆ. ಪೊಲೀಸರು ಮತ್ತು ಸೇನಾಪಡೆ ಜಂಟಿಯಾಗಿ ನಡೆಸುತ್ತಿರುವ ಈ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಕದನ ವಿರಾಮ ಉಲ್ಲಂಘನೆಭಾರತದ ಗಡಿಭಾಗದಲ್ಲಿ ನೌಶೇರಾ ಎಂಬಲ್ಲಿ ಪಾಕಿಸ್ತಾನದ ಸೇನಾಪಡೆ ಕದನ ವಿರಾಮ ಉಲ್ಲಂಘಿಸಿ ಬುಧವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿತ್ತು. ಭಾರತೀಯ ಸೇನಾಪಡೆಯೂ ಇದಕ್ಕೆ ಪ್ರತಿದಾಳಿ ನಡೆಸಿದೆ. ಬೆಳಗ್ಗೆ 7.30ಕ್ಕೆ ಈ ದಾಳಿ ನಡೆದಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.
ಸುಗೂ ಪ್ರದೇಶದಲ್ಲಿ ನಸುಕಿನ 1.45ರ ಹೊತ್ತಿಗೆ ಕಾರ್ಯಾಚರಣೆ ಪ್ರಗತಿ ಸಾಧಿಸಿದ್ದು, ಬೆಳಗ್ಗೆ 5.30ಕ್ಕೆ ಉಗ್ರರು ಹತರಾಗಿದ್ದಾರೆ. ಶೋಪಿಯಾನ್ ಜಿಲ್ಲೆಯ ಸುಗೂ ಪ್ರದೇಶದಲ್ಲಿ ಕಳೆದ 72 ಗಂಟೆಗಳ ಅವಧಿಯಲ್ಲಿ ಇದು ಮೂರನೇ ಆಪರೇಶನ್​. ಸೋಮವಾರ ಭದ್ರತಾ ಪಡೆಗಳು ಹಿಜ್ಬುಲ್ ಮುಜಾಹಿದ್ದಿನ್​ಗೆ ಸೇರಿದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದರೆ ಭಾನುವಾರ ಐವರು ಉಗ್ರರನ್ನು ರೆಬಾನ್ ಪ್ರದೇಶದಲ್ಲಿ ಹತ್ಯೆ ಮಾಡಿದ್ದವು.
ಇದನ್ನೂ ಓದಿ:ರಾಜಧಾನಿಯಲ್ಲಿ 500 ಗಡಿ ದಾಟಿದ ಕರೊನಾ
ನಿನ್ನೆ ಮತ್ತು ಇಂದು ಎರಡು ದಿನಗಳಲ್ಲಿ ಹಿಜ್ಬುಲ್ ಮುಜಾಹಿದ್ದೀನ್​ಗೆ ಸೇರಿದ 9 ಉಗ್ರರು ಭದ್ರತಾ ಪಡೆ ಗುಂಡೇಟಿಗೆ ಸಿಲುಕಿ ಹತರಾಗಿದ್ದಾರೆ. ಕಳೆದ ಎರಡು ವಾರಗಳ ಅವಧಿಯಲ್ಲಿ ಈ ಪ್ರದೇಶದಲ್ಲಿ ಒಟ್ಟು 9 ಆಪರೇಶನ್​ಗಳಾಗಿದ್ದು, 22 ಉಗ್ರರು ಕೊಲ್ಲಲ್ಪಟ್ಟಿದ್ದಾರೆ. ಇವರಲ್ಲಿ ಆರು ಉಗ್ರರು ಉಗ್ರಸಂಘಟನೆಯ ಟಾಪ್ ಕಮಾಂಡರ್​ಗಳಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.  (ಏಜೆನ್ಸೀಸ್)
VIDEO: ಅಸ್ಸಾಂನ ತೈಲ ಬಾವಿಯಿಂದ ಹೊಮ್ಮುತ್ತಿದೆ ಜ್ವಾಲೆ: ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
