ಗುವಾಹಟಿ:ಕಳೆದ ವಾರದಿಂದ ಪೂರ್ವೋತ್ತರ ರಾಜ್ಯಗಳಲ್ಲಿ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿ ಜನರ ಬದುಕನ್ನೇ ಕಸಿದಿದೆ. ನಿಂತುಕೊಳ್ಳಲು ಸಹ ಭೂಮಿ ಕಾಣದೇ ಎಲ್ಲಾ ಕಡೆ ನೀರು ತುಂಬಿಕೊಂಡಿದ್ದು, ಜನರ ಸ್ಥಿತಿ ಹೇಳತೀರದಾಗಿದೆ.
ಅಸ್ಸಾಂ, ಮೇಘಾಲಯ, ತ್ರಿಪುರ ರಾಜ್ಯಗಳು ಪ್ರವಾಹದ ಹೊಡೆತಕ್ಕೆ ಸಿಲುಕಿದ್ದು, ಈವರೆಗೆ ನೂರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಅಸ್ಸಾಂವೊಂದರಲ್ಲೇ ಈವರೆಗೆ 62 ಮಂದಿ ಸಾವನ್ನಪ್ಪಿದ್ದು, ತ್ರಿಪುರಾದಲ್ಲಿ 22 ಸಾವನ್ನಪ್ಪಿರುವುದು ವರದಿಯಾಗಿದೆ. ಈ ಮಧ್ಯೆ 30 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಪ್ರವಾಹ ಪರಿಸ್ಥಿತಿ ಕುರಿತು ಅವಲೋಕಿಸಿದ್ದು, ಹಲವು ಜನರು ನೆಲೆಗೊಂಡಿರುವ ತಾತ್ಕಾಲಿಕ ಶಿಬಿರಗಳಿಗೆ ಭೇಟಿ ನೀಡಿದ್ದಾರೆ. ಈ ನಡುವೆ ಕೇಂದ್ರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ಪ್ರವಾಹ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿರುವ ಪ್ರಧಾನಿ ಮೋದಿ, ಪ್ರವಾಹ ಪರಿಸ್ಥಿತಿ ಹಾಗೂ ಕೇಂದ್ರದಿಂದ ನೆರವು ನೀಡುವ ಬಗ್ಗೆ ಚರ್ಚಿಸಿದ್ದಾರೆ.
ಅಲ್ಲದೇ ಈ ಮೂರೂ ರಾಜ್ಯಗಳಿಗೆ ಕೇಂದ್ರದ ವಿಶೇಷ ತಂಡವನ್ನು ರವಾನಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇನ್ನು ಜನರನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವ ಕಾರ್ಯವನ್ನು ಎನ್​ಡಿಆರ್​ಎಫ್​ ತಂಡ ಮಾಡುತ್ತಿದೆ.(ಏಜೆನ್ಸೀಸ್​)
ಅಗ್ನಿಪಥ ಯೋಜನೆ ವಿರೋಧಿಸುವವರು ಮೂರ್ಖರು: ಕಾಂಗ್ರೆಸ್​ ವಿರುದ್ಧ ಸಚಿವ ಎ.ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + nineteen =
Remember me
