ನವದೆಹಲಿ:ಸ್ವಾಂತತ್ರ್ಯದ 75ನೇ ವರ್ಷದ ಸಂದರ್ಭದಲ್ಲಿ ಪ್ರಬಲ ಆರ್ಥಿಕ ಶಕ್ತಿಯಾಗಿ ಭಾರತವನ್ನು ಜಗತ್ತು ಗುರುತಿಸಿದೆ. ಭಾರತದ ಯಶಸ್ಸನ್ನು ಜಗತ್ತು ಹೊಗಳುತ್ತಿದೆ. ರೈತರು, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಪೂರಕವಾದ ಬಜೆಟ್​ ಇದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಹೇಳಿದರು.
ಬಜೆಟ್​ ಮಂಡನೆ ಆರಂಭಿಸಿದ ನಿರ್ಮಲಾ ಸೀತಾರಾಮನ್​ ಅವರು ಆರಂಭಿಕ ನುಡಿಗಳನ್ನಾಡಿದರು. ಕೋವಿಡ್​ 19 ಬಿಕ್ಕಟ್ಟಿನ ಸಮಯದಲ್ಲಿ 80 ಕೋಟಿ ಜನರಿಗೆ ಆಹಾರ ಧಾನ್ಯ ಪೂರೈಕೆ ಮಾಡಿದ್ದೇವೆ. ಪೌಷ್ಠಿಕ ಆಹಾರದ ಭದ್ರತೆ ನೀಡಿದ್ದೇವೆ. ಗರಿಬ್​ ಕಲ್ಯಾಣ ಯೋಜನೆಯಡಿ 2 ಲಕ್ಷ ಕೋಟಿ ರೂ. ವ್ಯಯಿಸಿದ್ದೇವೆ. 2023ರಿಂದ ಇನ್ನು ಒಂದು ವರ್ಷ ಉಚಿತ ಆಹಾರ ಧಾನ್ಯ ನೀಡಲಿದ್ದೇವೆ ಎಂದು ಹೇಳಿದರು.
ದೇಶದಲ್ಲಿ 222 ಕೋಟಿ ಕೋವಿಡ್​ ಲಸಿಕೆ ಡೋಸ್​ ನೀಡಲಾಗಿದೆ. ಇದರಿಂದ 102 ಕೋಟಿ ಜನ ಪ್ರಯೋಜನ ಪಡೆದಿದ್ದಾರೆ ಎಂದ ನಿರ್ಮಲಾ ಸೀತಾರಾಮನ್​, 9 ವರ್ಷಗಳಲ್ಲಿ ವಿಶ್ವದ 5ನೇ ಆರ್ಥಿಕ ಶಕ್ತಿಯಾಗಿ ಭಾರತ ಬೆಳೆದಿದೆ. 10ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಜಿಗಿದಿದೆ. ತಂತ್ರಜ್ಞಾನ, ಜ್ಞಾನಾಧಾರಿತ ಆರ್ಥಿಕ ಶಕ್ತಿ ರೂಪಿಸುತ್ತೇವೆ ಎಂದು ತಿಳಿಸಿದರು.
ದೇಶದಲ್ಲಿ 11.7 ಲಕ್ಷ ಶೌಚಗೃಹಗಳನ್ನು ನಿರ್ಮಿಸಿದ್ದೇವೆ. 47 ಕೋಟಿ ಜನ್​ಧನ್​ ಖಾತೆಗಳನ್ನು ತೆರೆದಿದ್ದೇವೆ. ದೇಶದ ಜಿಡಿಪಿ ಅಂದಾಜಿ 7ರಷ್ಟು ಏರಿಕೆಯಾಗಿದೆ. ತಲಾವಾರು ಆದಾಯ 1.97 ಲಕ್ಷ ರೂ.ಗೆ ಏರಿಕೆಯಾಗಿದೆ. ಅಮೃತಕಾಲದಲ್ಲಿ ಮೊದಲ ಬಜೆಟ್​ ಮಂಡನೆಯಾಗುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ಹಲವು ರೀತಿಯಲ್ಲಿ ನೆರವಾಗಲು ಕ್ರಮಗಳನ್ನು ರೂಪಿಸಲಾಗುವುದು. ಕಚ್ಚಾವಸ್ತುಗಳ ಪೂರೈಕೆ, ಬ್ರಾಂಡಿಂಗ್ ಮತ್ತು ಸಿದ್ಧವಸ್ತುಗಳಿಗೆ ಮಾರುಕಟ್ಟೆ ರೂಪಿಸಲು ಸರ್ಕಾರ ನೆರವಾಗಲಿದೆ ಎಂದು ಸಚಿವರು ಭರವಸೆ ನೀಡಿದರು.
ಕೇಂದ್ರ ಬಜೆಟ್​ಗೆ 7 ಆದ್ಯತೆಗಳಿವೆ ಎಂದು ವಿತ್ತ ಸಚಿವೆ ಘೋಷಿಸಿದರು. ಆ ಏಳು ಆದ್ಯತೆಗಳು ಯಾವುವೆಂದರೆ, ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಅಂಚಿನಲ್ಲಿರುವವರಿಗೆ ಸವಲತ್ತು, ಮೂಲಸೌಕರ್ಯ, ಸಾಮರ್ಥ್ಯದ ಸದ್ಬಳಕೆ, ಪರಿಸರ ಸ್ನೇಹಿ ಅಭಿವೃದ್ಧಿ, ಯುವಶಕ್ತಿಗೆ ಉತ್ತೇಜನ, ಆರ್ಥಿಕ ಸುಧಾರಣೆ ಈ ಏಳು ಆದ್ಯತೆಗಳನ್ನು ಬಜೆಟ್​ನಲ್ಲಿ ನೀಡಲಾಗಿದೆ ಎಂದರು.(ಏಜೆನ್ಸೀಸ್)
ಕೇಂದ್ರ ಬಜೆಟ್​ 2023: ಆಯವ್ಯಯ​ ಮಂಡನೆಗೆ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ

ಆಸ್ತಿಗಾಗಿ ಅಸಹಾಯಕ ಅಜ್ಜಿಯನ್ನೇ ಮನೆಯಿಂದ ಹೊರದಬ್ಬಿದ ಮೊಮ್ಮಗನಿಗೆ ತಕ್ಕ ಶಾಸ್ತಿ ಮಾಡಿದ ಮಧುಗಿರಿ ಎಸಿ!

ದೂರು ಕೊಟ್ರೆ ಹೆಂಡತಿ ಅಡಮಾನ ಇರಿಸ್ತೀನಿ ಎಂದು ಬೆದರಿಕೆ ಹಾಕಿದ್ದ ತುಮಕೂರು ಜೈಲು ಸಹಾಯಕ ಅಧೀಕ್ಷಕಿ ಎತ್ತಂಗಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
