ಜೈಪುರ:ಜೂನ್​ 04ರಂದು ಪ್ರಕಟಗೊಂಡ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವು ಬಹುಮತ ಪಡೆದು ಸರ್ಕಾರ ರಚಿಸಿದ್ದಾರಾದರೂ ನಿರೀಕ್ಷಿತ ಸ್ಥಾನಗಳಲ್ಲಿ ಗೆಲ್ಲುವಲ್ಲಿ ವಿಫಲವಾಗಿದೆ. ಪಕ್ಷದ ಸೋಲಿನ ಕುರಿತು ಮಾತನಾಡಿರುವ ಕೇಂದ್ರ ಕೃಷಿ ಸಚಿವ ಶಿವರಾಜ್​ ಸಿಂಗ್​ ಚೌಹಾಣ್​ ಎನ್​ಡಿಎ ಮೈತ್ರಿಕೂಟವು ಕಡಿಮೆ ಸ್ಥಾನಗಳನ್ನು ಗಳಿಸಲು ವಿದೇಶಿ ಹಸ್ತಕ್ಷೇಪವೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜೈಪುರದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಚೌಹಾಣ್​ ವಿಪಕ್ಷಗಳಲ್ಲಿ ಕಾಣದ ಕೆಲವು ವಿದೇಶಿ ಕೈಗಳ ಸಕ್ರಿಯವಾಗಿವೆ. ಅವುಗಳು ಬಿಜೆಪಿಯನ್ನು ಸೋಲಿಸಲು ಶ್ರಮಿಸುತ್ತಿರುತ್ತವೆ. 2024ರಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವು ಕಡಿಮೆ ಸ್ಥಾನಗಳಲ್ಲಿ ಗೆಲ್ಲಲು ಇದು ಕೂಡ ಮುಖ್ಯ ಕಾರಣ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಇನ್​ಸ್ಟಾಗ್ರಾಮ್​​​ನಲ್ಲಿ ತನ್ನ ಸ್ನೇಹಿತೆಯೊಂದಿಗೆ ಚಾಟ್​ ಮಾಡಿದ್ದಕ್ಕೆ ಗೆಳೆಯನನ್ನೇ ಕೊಂದ ಅಪ್ರಾಪ್ತ ವಯಸ್ಕ
ರಾಜಸ್ಥಾನ ಚುನಾವಣಾ ಉಸ್ತುವಾರಿ ವಿನಯ್​ ಸಹಸ್ರಬುದ್ಧೆ ಚೌಹಾಣ್ ಮಾತನಾಡಿ, ರಾಜಸ್ಥಾನದ 25 ಸ್ಥಾನಗಳ ಪೈಕಿ ನಾವು 11ರಲ್ಲಿ ಸೋತಿದ್ದೇವೆ. ರಾಷ್ಟ್ರವ್ಯಾಪಿ 65 ಸ್ಥಾನಗಳಲ್ಲಿ ಸೋಲು ಕಂಡಿದ್ದೇವೆ. ಪಕ್ಷವು ಈ ವಿಚಾರವಾಗಿ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದು, ಲೋಪದೋಷಗಳ ಕುರಿತು ಚರ್ಚೆಯಾಗಬೇಕಿದೆ. ಇದು ಯಾರನ್ನು ದೂಷಿಸುವ ಸಮಯವಲ್ಲ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಭಜನ್​ಲಾಲ್​ ಶರ್ಮಾ ಮಾತನಾಡಿ, ಪಕ್ಷವು ಎಲ್ಲಾ ಕಾರ್ಯಕರ್ತರ ಚಲನಚಲನದ ಮೇಲೆ ಗಮನ ಇಟ್ಟಿರುತ್ತದೆ ಎಂಬುದಕ್ಕೆ ನಾನೇ ಜೀವಂತ ಸಾಕ್ಷಿ. ಸಾಮಾನ್ಯ ಕಾರ್ಯಕರ್ತನಾಗಿದ್ದ ನಾನು ಇಂದು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ. ಪಕ್ಷವು ಎಲ್ಲರ ಕೆಲಸವನ್ನು ಮೇಲ್ವಿಚಾರಣೆ ಮಾಡುತ್ತದೆ ಮತ್ತು ಸೂಕ್ತ ಸಮಯದಲ್ಲಿ ಅವಕಾಶ ಕಲ್ಪಿಸಿಕೊಡುತ್ತದೆ ಎಂದು ಮುಖ್ಯಮಂತ್ರಿ ಭಜನ್​ಲಾಲ್​ ಶರ್ಮಾ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 16 =
Remember me
