ನವದೆಹಲಿ:ಸ್ವತಂತ್ರ ಭಾರತದ ಪ್ರಪ್ರಥಮ ಗವರ್ನಲ್​ ಜನರಲ್ ಆಗಿ ಕಾರ್ಯ ನಿರ್ವಹಿಸಿದ ಸಿ.ರಾಜಗೋಪಾಲ ಆಚಾರಿ ಅವರ ಮರೊ ಮೊಮ್ಮಗ ಸಿ.ಆರ್.ಕೇಶವನ್​​ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆ ಆಗಿದ್ದಾರೆ.
ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಮುಖಂಡರು ಕೇಶವನ್​​ ಅವರನ್ನು ಸ್ವಾಗತಿಸಿ ಶುಭ ಹಾರೈಸಿದ್ದಾರೆ.
ಪಕ್ಷ ಸೇರ್ಪಡೆ ನಂತರ ಮಾತನಾಡಿದ ಕೇಶವನ್ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ​​ ಬಿಜೆಪಿಗೆ ಸೇರಿಸಿದ ನನ್ನ ಹಿರಿಯರಿಗೆ ಧನ್ಯವಾದಗಳನ್ನು ಹೇಳ ಬಯಸುತ್ತೇನೆ.
ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ನೀತಿಗಳು, ಭ್ರಷ್ಟಾಚಾರ ರಹಿತ ಆಡಳಿತ ಮತ್ತು ಅಭಿವೃದ್ಧಿಗೆ ಅವರ ಕಾರ್ಯಸೂಚಿಯನ್ನು ಮೆಚ್ಚಿ ನಾನು ಬಿಜೆಪಿ ಸೇರಿದ್ದೇನೆ. ದೇಶದ ಆರ್ಥಿಕತೆಯನ್ನು ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯಾಗಿ ಪರಿವರ್ತಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಅವರನ್ನು ಕೇಶವನ್ನ ಬಿಜೆಪಿ ಸೇರ್ಪಡೆ ನಂತರ ಗುಣಗಾನ ಮಾಡಿದ್ದಾರೆ.
ಇದನ್ನೂ ಓದಿ:VIDEO| “ಮಾಡರ್ನ್​ ಬಟ್ಟೆ ಧರಿಸಿದವರು…” ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ
#WATCH| PM Modi's people-centric policies, corruption-free governance and reform-led inclusive development agenda have transformed India from a fragile economy to the 5th largest economy in the world: CR Kesavan, former Congress leaderKesavan joined BJP today.pic.twitter.com/4UFI34oTPM
ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್​ ತೊರೆದು ಬಿಜೆಪಿಯತ್ತ ಮುಖ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇದು ದಕ್ಷಿಣ ಭಾರತದಲ್ಲಿ ತುಸು ಹೆಚ್ಚು ಎಂದು ಹೇಳಬಹುದು.
ಇತ್ತೀಚಿಗೆ ಮಾಜಿ ಕೇಂದ್ರ ರಕ್ಷಣಾ ಸಚಿವ ಎ.ಕೆ.ಆ್ಯಂಟನಿ ಪುತ್ರ ಅನಿಲ್​ ಆ್ಯಂಟನಿ, ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್​ ಕುಮಾರ್​ ರೆಡ್ಡಿ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದರು.
ಈ ಹಿಂದೆ ತಮಿಳುನಾಡು​ ಹಾಗೂ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್​ ಪರವಾಗಿ ಕೆಲಸ ಮಾಡಿದ್ದ ಕೇಶವನ್​ ಫೆಬ್ರವರಿಯಲ್ಲಿ ಪಕ್ಷದ​ ಪ್ರಾಥಮಿಕ ಸದಸ್ಯ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
