ತಿರುಪತಿ:ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕುಟುಂಬ ಸಮೇತರಾಗಿ ತಿರುಮಲದಲ್ಲಿ ಶ್ರೀ ವೆಂಕಟೇಶ್ವರನ ದರ್ಶನ ಪಡೆದುಕೊಂಡರು. ಅವರು ಈ ಸಂದರ್ಭದಲ್ಲಿ ಭಾರತದ ತಂಡ ೨೦೨೩ ರ ವಿಶ್ವಕಪ್ ಗೆಲ್ಲಲೆಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು.
ಇದನ್ನೂ ಓದಿ
ಎಐಎಡಿಎಂಕೆಯಿಂದ ಹೊಸ ಮೈತ್ರಿಕೂಟ?

ಬಿಜೆಪಿ ಸಂಸದರೂ ಆಗಿರುವ ಗೌತಮ್ ಗಂಭೀರ್ ಬಾಲಾಜಿಯ ಮುಂಜಾನೆ ಸೇವೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ದೇವಸ್ಥಾನದ ರಂಗನಾಯಕರ ಮಂಟಪದಲ್ಲಿ ವೈದಿಕರು ಗಂಭೀರ್​ಗೆ ವೇದಾಶೀರ‍್ವಾದ ಮಾಡಿದರು. ಟಿಟಿಡಿ ಅಧಿಕಾರಿಗಳು ಸ್ಮರಣಿಕೆ ನೀಡಿ ಗೌರವಿಸಿ ತೀರ್ಥಪ್ರಸಾದ ನೀಡಿ ಗೌರವಿಸಿದರು. ಅಭಿಮಾನಿಗಳು ಗಂಭೀರ್ ಜತೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಮುಂಬರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತಕ್ಕೆ ಗೆಲ್ಲುವ ಎಲ್ಲ ಅವಕಾಶಗಳಿವೆ. ೧.೪ ಶತಕೋಟಿ ಭಾರತೀಯರ ಪ್ರಾರ್ತನೆಯೊಂದಿಗೆ ಭಾರತ ವಿಶ್ವಕಪ್‌ನಲ್ಲಿ ವಿಜಯಶಾಲಿ ತಂಡವಾಗಿ ಹೊರಹೊಮ್ಮಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಮುಂದಿನ ತಿಂಗಳು ಭಾರತದಲ್ಲಿ ಏಕದಿನ ವಿಶ್ವಕಪ್ ಆರಂಭವಾಗಲಿದ್ದು, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಅ.೮ ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಮೊದಲ ಪಂದ್ಯ ನಡೆಯಲಿದೆ. ಸದ್ಯ ಟೀಂ ಇಂಡಿಯಾ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದೆ.
ಮೈತ್ರಿಯ ಮರ್ಮಾಘಾತ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರತ್ಯೇಕ ಸಭೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
