ನವದೆಹಲಿ:ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ. ನಟವರ್​ ಸಿಂಗ್​ ಅವರು ನಿಧನರಾಗಿದ್ದಾರೆ. ಮೃತರಿಗೆ 93 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.
ಕಳೆದ ಕೆಲ ದಿನಗಳ ಹಿಂದೆ ಅವರ ಆರೊಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಅವರನ್ನು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಿಸಿದ್ದರು. ಅರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಶನಿವಾರ ತಡರಾತ್ರಿ ಇಹಲೋಕ ನಿಧನರಾದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನಟವರ್​ ಸಿಂಗ್​ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್​ ಸೇರಿದಂತೆ ಆಡಳಿತ ಹಾಗೂ ವಿಪಕ್ಷಗಳ ಸದಸ್ಯರು ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದಾರೆ. ಕಾಂಗ್ರೆಸ್​ನ ಮಾಜಿ ಸಂಸದರಾದ ನಟವರ್​ ಸಿಂಗ್​ ಅವರು ಯುಪಿಎ-1 (2004-05) ವಿದೇಶಾಂಗ ಸಚಿವರಾಗಿ ಕೆಲಸ ಮಾಡಿದ್ದರು.
Pained by the passing away of Shri Natwar Singh Ji. He made rich contributions to the world of diplomacy and foreign policy. He was also known for his intellect as well as prolific writing. My thoughts are with his family and admirers in this hour of grief. Om Shanti.pic.twitter.com/7eIR1NHXgJ
ಇದನ್ನೂ ಓದಿ:ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಲ್ಲೆ; ಅಮೆರಿಕಾದಲ್ಲಿ ಪ್ರತಿಭಟನೆ
ಟವರ್ ಸಿಂಗ್ ಅವರ ನಿಧನದಿಂದ ಬಹಳ ನೋವಾಗಿದೆ. ಅವರು ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿಯ ಬಹಳ ಕೊಡುಗೆಗಳನ್ನು ನೀಡಿದ್ದಾರೆ. ಅವರು ತಮ್ಮ ಬುದ್ಧಿವಂತಿಕೆ ಮತ್ತು ಸಮೃದ್ಧ ಬರವಣಿಗೆಗೆ ಹೆಸರುವಾಸಿಯಾಗಿದ್ದರು ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.
ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ 1931ರಲ್ಲಿ ಜನಿಸಿದ ನಟವರ್ ಸಿಂಗ್‌ ಅವರು ಹಿರಿಯ ರಾಜತಾಂತ್ರಿಕರಾಗಿದ್ದರು. ಅವರು ತಮ್ಮ ರಾಜಕೀಯ ಜೀವನಕ್ಕೆ ರಾಜತಾಂತ್ರಿಕತೆಯ ಅನುಭವ ತಂದರು. ಅವರು ‘ದಿ ಲೆಗಸಿ ಆಫ್ ನೆಹರು: ಎ ಮೆಮೋರಿಯಲ್ ಟ್ರಿಬ್ಯೂಟ್’ ಮತ್ತು ‘ಮೈ ಚೀನಾ ಡೈರಿ 1956-88’ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಆತ್ಮಕಥೆಗೆ ‘ಒಂದು ಜೀವನವೇ ಸಾಕಾಗುವುದಿಲ್ಲ’ (ಒನ್ ಲೈಫ್ ಈಸ್ ನಾಟ್ ಎನಫ್) ಎಂದು ಹೆಸರಿಸಲಾಗಿದೆ.
Deeply saddened by the passing away of K Natwar Singh, distinguished diplomat and former External Affairs Minister.His many contributions include a vital role in the July 2005 India – US nuclear deal. His writings, especially on China, provided valuable insights into our…pic.twitter.com/HsMXzI2WtF
पूर्व विदेश मंत्री नटवर सिंह जी के निधन का समाचार दुखद है ।ईश्वर उनके परिजनों को यह क्षति सहने की शक्ति दे और दिवंगत आत्मा को सदगति प्रदान करें।pic.twitter.com/WAP3HQJlgF
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
