ಮುಂಬೈ:ತಮ್ಮ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿರುವ ಬಾಂಬೆ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಮಂಗಳವಾರ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.
ಮುಂಬೈ ನಗರದ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು 100 ಕೋಟಿ ರೂಪಾಯಿ ಲಂಚ ವಸೂಲಿ ಆರೋಪವನ್ನು ಅನಿಲ್ ದೇಶಮುಖ್ ಅವರ ಮೇಲೆ ಮಾಡಿದ್ದರು. ಇದರಿಂದ ತೀವ್ರ ಮುಜಗರಕ್ಕೆ ಒಳಗಾಗಿದ್ದ ಅನಿಲ್ ದೇಶಮುಖ್ ಅವರ ರಾಜೀನಾಮೆಗೆ ಪ್ರತಿ ಪಕ್ಷಗಳು ಆಗ್ರಹಿಸಿದ್ದವು. ಅಲ್ಲದೇ ಪರಮ್ ಬೀರ್ ಸಿಂಗ್ ಲಂಚದ ಆರೋಪದ ಕುರಿತಂತೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಬಾಂಬೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:‘ನಾನು ಬಂಗಾಳಿ ಮಾತನಾಡುವುದರ ಬಗ್ಗೆಯೂ ದೀದಿ ಸಿಟ್ಟಾಗ್ತಿದ್ದಾರೆ’ : ಮೋದಿ
ಸಿಂಗ್ ಅವರ ಅರ್ಜಿ ಪರಿಗಣಿಸಿದ್ದ ಬಾಂಬೆ ಹೈಕೋರ್ಟ್​ ಸಿಬಿಐ ತನಿಖೆಗೆ ಅಸ್ತು ಎಂದಿತ್ತು. ಇದರಿಂದ ಅನಿವಾರ್ಯವಾಗಿ ದೇಶಮುಖ್ ಸೋಮವಾರ ರಾಜೀನಾಮೆ ನೀಡಿದ್ದರು. ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.
ಇದೇ ವೇಳೆ ಬಾಂಬೆ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವೂ ಸುಪ್ರೀಂಕೋರ್ಟ್​ ಕದ ತಟ್ಟಿದೆ. ಅಲ್ಲದೇ ಆರು ಅಧಿಕಾರಿಗಳನ್ನೊಳಗೊಂಡ ಸಿಬಿಐ ತಂಡ ಈ ಪ್ರಕರಣದ ಪ್ರಾಥಮಿಕ ತನಿಖೆ ಮಾಡಲು ಮುಂಬೈಗೆ ಆಗಮಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಏ. 15ರೊಳಗೆ ಕರೊನಾದಿಂದಾಗಿ ದೇಶದಲ್ಲಿ 50 ಸಾವಿರ ಜನರ ಸಾವು!; ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಈ ಮೂರು ರಾಜ್ಯಗಳಲ್ಲಿ ಕರೊನಾ ಹೆಚ್ಚುತ್ತಿರುವ ಬಗ್ಗೆ ಕೇಂದ್ರದ ಕಳವಳ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 5 =
Remember me
