ನವದೆಹಲಿ:ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಒಂದರ ಹಿಂದೆ ಒಂದರಂತೆ ಆಘಾತ ಎದುರಾಗುತ್ತಿದ್ದು, ಈಗ ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಅಥ್ಲೀಟ್‌ ಪದ್ಮಿನಿ ಥಾಮಸ್‌ ಕಾಂಗ್ರೆಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ತಿರುವನಂತಪುರಂನಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾದ ಪದ್ಮಿನಿ ಥಾಮಸ್​ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್‌  ಸೇರಿದಂತೆ ಹಿರಿಯರು ಬರಮಾಡಿಕೊಂಡರು. ಪದ್ಮಿನಿ ಥಾಮಸ್ 1982ರ ಏಷ್ಯನ್‌ ಕ್ರೀಡಾಕೂಟದ ಬೆಳ್ಳಿ ಮತ್ತು ಕಂಚು ಪದಕ ವಿಜೇ‌ತೆ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತರು.
ಇದನ್ನೂ ಓದಿ:ಬೆಂಗಳೂರು ಜಲಕ್ಷಾಮ; ರಾಜ್ಯಕ್ಕೆ ಬಿಜೆಪಿಯವರು ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ: ಡಿ.ಕೆ. ಶಿವಕುಮಾರ್
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಪದ್ಮಿನಿ, ಕಾಂಗ್ರೆಸ್​ ಪಕ್ಷದಲ್ಲಿ ನಾನು ಭಾವನಾತ್ಮಕವಾಗಿ ಹಾಗೂ ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದ ಕಾರಣ ಬಿಜೆಪಿ ಸೇರಲು ಪ್ರೇರಣೆ ನೀಡಿತ್ತು. ನಾನು ಯಾವುದೇ ಆಕಾಂಕ್ಷೆ ಇಲ್ಲದೆ ಮೋದಿ ಅವರ ಸರ್ಕಾರವು ಮಹಿಳೆಯರಿಗೆ ನೀಡಿದ ಆದ್ಯತೆ ಮತ್ತು ಮೀಸಲಾತಿಯಿಂದ ನಾನು ಪ್ರಭಾವಿತಳಾಗಿ ಬಿಜೆಪಿ ಸೇರಿದ್ದೇನೆ ಎಂದು ಪದ್ಮಿನಿ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್‌ ನಾಯಕ ಕೆ. ಕರುಣಾಕರನ್‌ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್‌ ಇತ್ತೀಚಿಗೆ ಬಿಜೆಪಿ ಸೇರ್ಪಡೆಗೊಂಡಿದ್ದರು. ಈ ವೇಳೆ ಮಾತನಾಡಿದ ಸುರೇಂದ್ರನ್​ ಮುಂದಿನ ದಿನಗಳಲ್ಲಿ ಕಾಂಗ್ರೆಸ್​ ಪಕ್ಷದ ಅನೇಕ ಹಿರಿಯ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 15 =
Remember me
