ಚೆನ್ನೈ:ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಶನಿವಾರ ನೇಮಿಸಲಾಗಿದೆ. ರಾಜ್ಯ ಘಟಕದ ಅಧ್ಯಕ್ಷ ಎಲ್. ಮುರುಗನ್ ಈ ನೇಮಕ ಮಾಡಿದ್ದಾರೆ.
2011ರ ಕರ್ನಾಟಕ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳಿಧರ್​ ರಾವ್​ ಹಾಗೂ ಎಲ್​. ಮುರುಗನ್​ ಸಮ್ಮುಖದಲ್ಲಿ ಪಕ್ಷ ಸೇರಿದ್ದರು.
ಇದನ್ನೂ ಓದಿ:ಬಣ್ಣದ ಲೋಕಕ್ಕೆ ನಶೆ ನಂಜು: ಕನ್ನಡ ಚಲನಚಿತ್ರರಂಗದಲ್ಲಿ ಬೇರು ಬಿಟ್ಟಿರುವ ಡ್ರಗ್ಸ್ ವಿಕೃತಿ
ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ ಎಲ್​. ಮುರುಗನ್, ಮಾಜಿ ಐಪಿಎಸ್​ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ಅವರ ಭವಿಷ್ಯ ಯಶಸ್ವಿಯಾಗಿರಲಿ ಎಂದು ಶುಭ ಹಾರೈಸಿದ್ದರು. ​
ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಅವರು ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ್ದರು. ತಮಿಳುನಾಡಿನ ಕರೂರು ಜಿಲ್ಲೆಯ ಕೃಷಿ ಕುಟುಂಬದವರಾದ ಅಣ್ಣಾಮಲೈ, ಮೆಕಾನಿಕಲ್ ಇಂಜಿನಿಯರಿಂಗ್ ಹಾಗೂ ಐಐಎಂ ಲಖನೌನಿಂದ ಎಂಬಿಎ ಪದವಿಗಳಿಸಿದ್ದಾರೆ. ನಂತರ ನಾಗರೀಕ ಸೇವೆಗೆ ಸೇರಿದ್ದರು.(ಏಜೆನ್ಸೀಸ್​)
ಕೇಂದ್ರ ಸರ್ಕಾರದ ನಿರ್ಣಯದಿಂದ ಫುಲ್​ ಖುಷಿಯಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − three =
Remember me
