ಚೆನ್ನೈ:ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಭಾನುವಾರ ಸಂಜೆ ಅವರು ಫೇಸ್​ಬುಕ್​ ಲೈವ್​ನಲ್ಲಿ ಚುನಾವಣೆಗೆ ನಿಲ್ಲುವುದಾಗಿ ಘೋಷಿಸಿದ್ದಾರೆ.ತಮಿಳುನಾಡಿನಲ್ಲಿ ಏಪ್ರಿಲ್​ 2021 ಚುನಾವಣೆ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ಅಣ್ಣಾ ಮಲೈ ಅವರು ಬಿಜೆಪಿಯಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ಅಣ್ಣಾಮಲೈ ಅವರು ಕರ್ನಾಟಕದ ಅತ್ಯಂತ ಸೂಕ್ಷ್ಮವಾದ ಚಿಕ್ಕಮಗಳೂರು ಹಾಗೂ ಉಡುಪಿಯಲ್ಲಿ ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿಯಾಗಿ ಹಾಗೂ ಬೆಂಗಳೂರು ದಕ್ಷಿಣ ವಲಯದ ಡಿಸಿಪಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು.ಕಳೆದ ವರ್ಷ ವಯಕ್ತಿಕ ಕಾರಣಗಳಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈಗ ಚುನಾವಣೆಗೆ ನಿಲ್ಲುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿಈ ಫಾದರ್​ ಚರ್ಚ್​ಗೆ ಬರೋರನ್ನ ಶೂಟ್​ ಮಾಡ್ತಾರೆ…!
ಫೇಸ್​ ಬುಕ್​ನಲ್ಲಿ ‘ಮಿಸ್​​ ಯೂ ಕರ್ನಾಟಕ’ ಎಂದು ಕನ್ನಡಿಗರ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸ್​​​ ಸೇವೆಯಲ್ಲಿದ್ದಾಗ ಕನ್ನಡಿಗರು ಬೆಟ್ಟದಷ್ಟು ಪ್ರೀತಿ ಕೊಟ್ಟರು. ನಿಮ್ಮ ಪ್ರೀತಿಗೆ ನಾನು ಋಣಿ. ನನಗೆ ಜನರೊಂದಿಗೆ ಇದ್ದು ರಾಜಕೀಯ ಸುಧಾರಣೆ ಮಾಡುವ ಆಲೋಚನೆ ಇದೆ. ಐಪಿಎಸ್​ ಹುದ್ದೆಗೆ ರಾಜೀನಾಮೆ ನೀಡಿ ನನ್ನೂರಿಗೆ ಬಂದಿದ್ದೇನೆ. ಜನರ ಸೇವೆ ಮಾಡಲಿದ್ದೇನೆ ಎಂದರು.
ನನ್ನ ಮುಂದಿನ ಆಲೋಚನೆ ಕುಟುಂಬದ ಜತೆ ಸಮಯ ಕಳೆಯುವುದು, ತಮಿಳುನಾಡು ರಾಜಕೀಯಕ್ಕೆ ಪ್ರವೇಶ ಮಾಡಬೇಕು. ಜನರ ಸೇವೆ ಮಾಡಬೇಕು. ರಾಜಕೀಯ ವ್ಯವಸ್ಥೆ ಬದಲಾಯಿಸಬೇಕು. ಪೊಲೀಸ್​​ ಅಧಿಕಾರಿಗಳಿ ಉತ್ತಮ ವಾತಾವರಣ ಕಲ್ಪಿಸಬೇಕು ಎಂದು ಹೇಳಿಕೊಂಡರು.
ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ಆರಂಭ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 4 =
Remember me
