ನವದೆಹಲಿ:ಮುಂಬೈನಲ್ಲಿ ನಡೆದ ನಕಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ತನ್ನ ಗೆಳೆಯ, ಗ್ಯಾಂಗ್‌ಸ್ಟರ್ ಸಂದೀಪ್ ಗಡೋಲಿ ಹತ್ಯೆಯ ಆರೋಪಿಗಳಲ್ಲಿ ಒಬ್ಬಳಾದ ಮಾಜಿ ಮಾಡೆಲ್ ದಿವ್ಯಾ ಪಹುಜಾಳನ್ನು ಗುರುಗ್ರಾಮ್ ಹೋಟೆಲ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಲಾಗಿದೆ. ಈಕೆಗೆ ಜಾಮೀನು ನೀಡಿದ ತಿಂಗಳ ನಂತರ ಈ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಐದು ಮಂದಿ ಹೋಟೆಲ್‌ಗೆ ಕರೆದೊಯ್ದು ಆಕೆಯ ತಲೆಗೆ ಗುಂಡು ಹಾರಿಸಿದ್ದಾರೆ.
ಎಸೆಯಲು ಆಕೆಯ ಶವವನ್ನು ಹೋಟೆಲ್‌ನಿಂದ ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಮೂವರು ಆರೋಪಿಗಳನ್ನು ಗುರುಗ್ರಾಮ್ ಪೊಲೀಸರು ಬಂಧಿಸಿದ್ದಾರೆ.
ಪಹುಜಾ ಹತ್ಯೆಯಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಬಂಧಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಭೂಪೇಂದರ್ ಸಿಂಗ್ ಸಾಂಗ್ವಾನ್ ತಿಳಿಸಿದ್ದಾರೆ.
ಫೆಬ್ರವರಿ 7, 2016 ರಂದು ಮುಂಬೈ ಹೋಟೆಲ್‌ನಲ್ಲಿ ಗ್ಯಾಂಗ್‌ಸ್ಟರ್ ಸಂದೀಪ್ ಗಡೋಲಿ ಹತ್ಯೆಗೆ ಸಂಬಂಧಿಸಿದಂತೆ ಏಳು ವರ್ಷಗಳ ನಂತರ ಪಹುಜಾ ಅವರನ್ನು ಬಂಧಿಸಲಾಗಿತ್ತು.ಕಳೆದ ವರ್ಷ ಜೂನ್‌ನಲ್ಲಿ ಬಾಂಬೆ ಹೈಕೋರ್ಟ್ ಈಕೆಗೆ ಜಾಮೀನು ನೀಡಿತ್ತು.
ಗ್ಯಾಂಗ್‌ಸ್ಟರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಪಹುಜಾ, ಆಕೆಯ ತಾಯಿ ಮತ್ತು ಐವರು ಪೊಲೀಸರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.
ಮುಂಬೈ ಪೊಲೀಸರ ಪ್ರಕಾರ, ಗಡೋಲಿಯನ್ನು ಆತನ “ಗೆಳತಿ” ಪಹುಜಾ ಸಹಾಯದಿಂದ ಬಲೆಗೆ ಬೀಳಿಸಿದ ನಂತರ ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿತ್ತು.
ಪ್ರತಿಸ್ಪರ್ಧಿ ಗ್ಯಾಂಗ್​ನ ವೀರೇಂದ್ರ ಕುಮಾರ್ ಅಲಿಯಾಸ್ ಬಿಂದರ್ ಗುಜ್ಜರ್ ಎಂಬಾತ ಗಡೋಲಿ ಹತ್ಯೆಗೈಯಲು ಹರಿಯಾಣ ಪೊಲೀಸ್ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಮುಂಬೈ ಪೊಲೀಸರ ಪ್ರಕಾರ, ಎನ್‌ಕೌಂಟರ್‌ನ ಸಮಯದಲ್ಲಿ ಗುಜ್ಜರ್ ಜೈಲಿನಲ್ಲಿದ್ದನು, ಆದರೆ, ಅವನ ಸಹೋದರ ಮನೋಜ್ ಸಹಾಯದಿಂದ ಸಂಚು ರೂಪಿಸಿದ್ದನು. ಇದಕ್ಕಾಗಿ, ಪಹುಜಾಳನ್ನು ಹನಿ ಟ್ರ್ಯಾಪ್‌ನಂತೆ ಬಳಸಿದ್ದ.

ಇರಾನ್ ಜನರಲ್ ಸುಲೇಮಾನಿ ಸಮಾಧಿ ಬಳಿ ಅವಳಿ ಸ್ಫೋಟ: 100 ಕ್ಕೂ ಹೆಚ್ಚು ಸಾವು

2024ರಲ್ಲಿ ಯಾವ ಷೇರುಗಳಿಗೆ ಬರಲಿದೆ ಬೇಡಿಕೆ?: ಹೀಗಿದೆ ಪ್ರಮುಖ ಬ್ರೋಕರೇಜ್​ ಸಂಸ್ಥೆಗಳ ಭವಿಷ್ಯ

ಎಸ್‌ಬಿಐ ಸೆಕ್ಯುರಿಟೀಸ್ ಬ್ರೋಕರೇಜ್ ಸಂಸ್ಥೆಯ ಭವಿಷ್ಯ: ಲೋಕಸಭೆ ಚುನಾವಣೆ ನಂತರ ಷೇರು ಮಾರುಕಟ್ಟೆಯಲ್ಲಿ ಏರುಗತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
