ಶಿಮ್ಲಾ:ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ಮೃತದೇಹ ಹಿಮಾಚಲ ಪ್ರದೇಶದ ಶಿಮ್ಲಾದ ಅವರ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಶಿಮ್ಲಾ ಎಸ್​ಪಿ ಮೋಹಿತ್​ ಚಾವ್ಲಾ ಮಾಹಿತಿ ನೀಡಿದ್ದಾರೆ. ವೈದ್ಯರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಯುತ್ತಿದೆ. ಸಂಬಂಧಪಟ್ಟವರ ವಿಚಾರಣೆಯನ್ನೂ ನಡೆಸಲಾಗುತ್ತಿದೆ ಎಂದು ಮೋಹಿತ್ ತಿಳಿಸಿದ್ದಾರೆ.
1973ರ ಬ್ಯಾಚ್​ನ ಐಪಿಎಸ್ ಅಧಿಕಾರಿಯಾಗಿದ್ದ ಅಶ್ವನಿ ಕುಮಾರ್​ 2008ರಿಂದ 2010ರವರೆಗೆ ಸಿಬಿಐ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಇವರ ಅಧಿಕಾರ ಅವಧಿಯಲ್ಲಿ ಹಲವು ಹೈಪ್ರೊಫೈಲ್​ ಪ್ರಕರಣದ ತನಿಖೆಯನ್ನು ನಡೆಸಲಾಗಿತ್ತು.
2014ರಲ್ಲಿ ನಾಗಾಲ್ಯಾಂಡ್​ನ ರಾಜ್ಯಪಾಲರಾಗಿಯೂ ನೇಮಕ ಆಗಿದ್ದರು. ಅದಕ್ಕೂ ಮೊದಲು 2013ರಲ್ಲಿ ಅತ್ಯಂತ ಕಡಿಮೆ ಅವಧಿಗೆ ಮಣಿಪುರ ಗವರ್ನರ್​ ಆಗಿದ್ದರು. 2008ರಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕಗೊಳ್ಳುವ ಮೊದಲು 2006ರಿಂದ 2008ರವರೆಗೆ ಹಿಮಾಚಲ ಪ್ರದೇಶದ ಡಿಜಿಪಿ ಆಗಿ ಕರ್ತವ್ಯ ಮಾಡಿದ್ದರು. (ಏಜೆನ್ಸೀಸ್)
ಶಶಿಕಲಾ ನಟರಾಜನ್​ರ 2000 ಕೋಟಿ ರೂ.ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಐಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
