ಹಾಸನ:ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಮಾತ್ರವಲ್ಲ, ಮೋದಿಯ ಆ ನಡೆಗೆ ತಮ್ಮ ಖುಷಿಯನ್ನು ವ್ಯಕ್ತಪಡಿಸಿ ಧನ್ಯವಾದವನ್ನೂ ತಿಳಿಸಿದ್ದಾರೆ.
ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದಲ್ಲಿರುವ ಹೊಯ್ಸಳ ವಾಸ್ತುಶಿಲ್ಪದ ದೇವಾಲಯಗಳನ್ನು ಯುನೆಸ್ಕೊ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಿಸುವ ಸಂಬಂಧ ನಾಮಾಂಕಿತಗೊಳಿಸಿದ ಹಿನ್ನೆಲೆಯಲ್ಲಿ ಅವರು ಈ ಅಭಿನಂದನೆಯನ್ನು ತಿಳಿಸಿದ್ದಾರೆ.
ಇದನ್ನೂ ಓದಿ:ಟೋಯಿಂಗ್​ಗೆ ಬಂದಿದ್ದವರನ್ನು ತರಾಟೆಗೆ ತಗೊಂಡ ಜನರು; ಟೋ ಮಾಡದೆ ವಾಪಸ್ ಹೋದ ಪೊಲೀಸರು
ಈ ಸಂಬಂಧ ತಮ್ಮ ಸಲಹೆಯನ್ನು ಪ್ರಧಾನಿ ಮೋದಿಯವರು ಸ್ವೀಕರಿಸಿದ್ದು ಖುಷಿ ನೀಡಿದೆ. 1986ರಲ್ಲಿ ಹಂಪೆ, 1987ರಲ್ಲಿ ಪಟ್ಟದಕಲ್ಲು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿದ ಬಳಿಕ ರಾಜ್ಯದ ಯಾವ ಸ್ಥಳವೂ ಮತ್ತೆ ಆ ಪಟ್ಟಿಗೆ ಸೇರಿಲ್ಲ. ಎಲ್ಲವೂ ಅಂದುಕೊಂಡಂತೆಯೇ ಆದರೆ ನನ್ನೂರಿನ ಈ ಅದ್ಭುತ ಸ್ಥಳ 2023ರಲ್ಲಿ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಲಿದೆ. ಆ ನಿಟ್ಟಿನಲ್ಲಿ ಕ್ರಮಕೈಗೊಂಡಿದ್ದಕ್ಕೆ ಧನ್ಯವಾದ ಎಂದು ದೇವೇಗೌಡರು ಮೋದಿಯ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಶ್ವ ಪರಂಪರೆ ಪಟ್ಟಿಗೆ ಹೊಯ್ಸಳ ದೇವಾಲಯ ಸಮೂಹ ನಾಮಾಂಕಿತ; ಭಾರತದಿಂದ ಯುನೆಸ್ಕೊಗೆ ಪ್ರಸ್ತಾವನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 15 =
Remember me
