ನವದೆಹಲಿ:ಮಾಜಿ ಪ್ರಧಾನಮಂತ್ರಿ ಮನಮೋಹನ್​ ಸಿಂಗ್​ ತೀವ್ರ ಎದೆನೋವಿನಿಂದ ಬಳಲುತ್ತಿದ್ದು, ಅವರನ್ನು ಇಲ್ಲಿನ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ (ಏಮ್ಸ್​) ದಾಖಲಿಸಲಾಗಿದೆ.
ಸಿಂಗ್​ ಅವರಿಗೆ 87 ವರ್ಷ ವಯಸ್ಸಾಗಿದ್ದು, 2009ರಲ್ಲಿ ಏಮ್ಸ್​ನಲ್ಲಿಯೇ ತೆರೆದ ಹೃದಯದ ಬೈಪಾಸ್​ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿತ್ತು.ಎರಡು ಅವಧಿಗೆ ಪ್ರಧಾನಿಯಾಗಿದ್ದ ಮನಮೋಹನ್​ ಸಿಂಗ್​, ಪ್ರಸ್ತುತ ಎನ್​ಡಿಎ ಸರ್ಕಾಋದ ಆರ್ಥಿಕ ನೀತಿಗಳ ಕಟು ಟೀಕಾಕಾರಗಿದ್ದರು. ಪಂಜಾಬ್​ ಸರ್ಕಾರಕ್ಕೆ ವಿಶೇಷ ಆರ್ಥಿಕ ಸಲಹೆಗಾರರಾಗಬೇಕು ಎನ್ನುವ ಸಿಎಂ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರ ಪ್ರಸ್ತಾಪಕ್ಕೆ ಒಪ್ಪಿದ್ದರು.
ಅಂದಿನ ಪ್ರಧಾನಿ ಪಿ.ವಿ. ನರಸಿಂಹ್​ರಾವ್​ ಅವರ ಅವಧಿಯಲ್ಲಿ ಹಣಕಾಸು ಸಚಿವರಾಗಿ 1990ರ ದಶಕದಲ್ಲಿ ಆರ್ಥಿಕ ಸುಧಾರಣೆಗೆ ನಾಂದಿ ಹಾಡಿದರು. ಆರ್ಥಿಕ ಉದಾರೀಕರಣದ ಹರಿಕಾರ ಎಂದೇ ಮನ್​ಮೋಹನ್​ ಅವರನ್ನು ಕರೆಯಲಾಗುತ್ತದೆ. ವಿಶ್ವ ಆರ್ಥಿಕ ಒಪ್ಪಂದಕ್ಕೆ ಸಮ್ಮತಿಸುವ ಮೂಲಕ ದೇಶದಲ್ಲಿ ಜಾಗತೀಕರಣದ ಹೆಬ್ಬಾಗಿಲು ತೆರೆಯಲು ಕಾರಣರಾಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
