ನವದೆಹಲಿ:ಎದೆನೋವಿನ ಸಂಬಂಧ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್​) ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿದರು.
ಹೊಸ ಔಷಧವೊಂದಕ್ಕೆ ಅವರ ದೇಹ ವ್ಯತಿರಿಕ್ತವಾಗಿ ವರ್ತಿಸಿದ್ದರಿಂದ, ಅವರಲ್ಲಿ ಎದೆನೋವು ಹಾಗೂ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಅವರನ್ನು ಏಮ್ಸ್​ಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ:ಗಡಿಯಲ್ಲಿ ಚೀನಾದ ಉಪಟಳ; ಧಾವಿಸಿದ ಭಾರತೀಯ ವಾಯುಪಡೆ ವಿಮಾನ
ಸೋಮವಾರದ ವೇಳೆಗೆ 87 ವರ್ಷದ ಮಾಜಿ ಪ್ರಧಾನಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಯಿತು. ಆದರೂ ಒಂದು ದಿನ ಅವರನ್ನು ನಿಗಾದಲ್ಲಿ ಇರಿಸಿ, ಮಂಗಳವಾರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಏಮ್ಸ್​ ವೈದ್ಯರು ತಿಳಿಸಿದ್ದಾರೆ.
ಕೊಂಚ ಜಾಗರೂಕತೆಯಿಂದಲೇ ‘ರಾಬರ್ಟ್​’ ಬೆಡಗಿಯ ಸಿಂಗಿಂಗ್​ ಟ್ಯಾಲೆಂಟ್ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
