ನವದೆಹಲಿ: ಕೊವಿಡ್​-19 ಸೋಂಕಿಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರು ಆರ್ಮಿ ರಿಸರ್ಚ್​ ಆ್ಯಂಡ್​ ರೆಫರಲ್​ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ವೆಂಟಿಲೇಟರ್​​ನಲ್ಲಿ ಅವರನ್ನು ಇಡಲಾಗಿದೆ.
ಪ್ರಣಬ್​ ಮುಖರ್ಜಿಯವರಿಗೆ ಇಂದು ಮಿದುಳು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಸರ್ಜರಿ ಮಾಡಲಾಗಿದ್ದು, ಬಳಿಕ ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಪ್ರಣಬ್ ಮುಖರ್ಜಿ, ನಾನು ಬೇರೆ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಇಂದು ಕೊವಿಡ್​-19 ಟೆಸ್ಟ್​ಗೆ ಒಳಗಾದಾಗ ಅದರ ವರದಿ ಪಾಸಿಟಿವ್​ ಬಂದಿದೆ ಎಂದು ಹೇಳಿದ್ದರು.
ಇದೀಗ ಆಸ್ಪತ್ರೆ ಮೂಲಗಳು ವರದಿ ನೀಡಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಆದರೆ ಪ್ರಣಬ್​ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹಾಗಾಗಿ ವೆಂಟಿಲೇಟರ್​ನಲ್ಲಿದ್ದಾರೆ ಎಂದು ತಿಳಿಸಿವೆ.ಇದನ್ನೂ ಓದಿ:ಕೊವಿಡ್​-19 ಲಸಿಕೆಗೆ ಸೆಪ್ಟೆಂಬರ್​ವರೆಗೆ ಕಾಯಬೇಕಿಲ್ಲ…?; ರಷ್ಯಾದಿಂದ ಬಂತು ಗುಡ್​ ನ್ಯೂಸ್​
ಪ್ರಣಬ್​ ಮುಖರ್ಜಿ ಬೇಗ ಚೇತರಿಸಿಕೊಳ್ಳಲಿ ಎಂದು ಕಾಂಗ್ರೆಸ್​ ಮುಖಂಡರಾದ ರಾಹುಲ್​ ಗಾಂಧಿ, ಕೇಂದ್ರ ಸಚಿವ ಪಿಯೂಷ್​ ಗೋಯಲ್​, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಹಾರೈಸಿದ್ದಾರೆ. (ಏಜೆನ್ಸೀಸ್​)
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕರೊನಾ ಸೋಂಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 3 =
Remember me
