ವಿಜಯವಾಡ:ಹಲವು ವರ್ಷಗಳವರೆಗೆ ಕ್ರಿಕೆಟಿಗನಾಗಿ ಅದ್ಭುತ ಪ್ರದರ್ಶನಗಳೊಂದಿಗೆ ಕ್ರೀಡಾಭಿಮಾನಿಗಳನ್ನು ರಂಜಿಸಿದ್ದ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು, ಇದೀಗ ಹೊಸ ಹಾದಿ ಹಿಡಿಯಲು ಮುಂದಾಗಿದ್ದಾರೆ. ಶೀಘ್ರದಲ್ಲೇ ಸಾರ್ವಜನಿಕ ಸೇವೆಯತ್ತ ತಮ್ಮನ್ನು ತಾವು ತೊಡಗಿಸಿಕೊಳ್ಳಲಿದ್ದಾರೆ. ​
ಗುಂಟೂರು ಜಿಲ್ಲೆಯ ಪ್ರವಾಸದಲ್ಲಿ ಬಿಜಿಯಾಗಿರುವ ರಾಯುಡು, ಅಮಿನಾಬಾದ್​ನಲ್ಲಿರುವ ಮೂಲಕರಿಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ, ಫಿರಂಗಿಪುರದಲ್ಲಿರುವ ಸಾಯಿ ಬಾಬ ದೇವಸ್ಥಾನ ಮತ್ತು ಬಾಲ ಯೇಸು ಚರ್ಚಿಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಷ್ಟೇ ಅಲ್ಲದೆ, ಪ್ರತಿಪಾಡು ವಿಧಾನಸಭಾ ಕ್ಷೇತ್ರದ ವಟ್ಟಿಚೇರುಕುರು ಮಂಡಲದ ಮುಟ್ಲೂರು ಗ್ರಾಮಕ್ಕೆ ಭೇಟಿ ನೀಡಿ ಶಾಲಾ ವಿದ್ಯಾರ್ಥಿಗಳೊಂದಿಗೆ ಮಾತುಕತೆ ಸಹ ನಡೆಸಿದರು. ಅಲ್ಲದೆ, ವಿದ್ಯಾರ್ಥಿನಿಯರೊಂದಿಗೆ ನೆಲದ ಮೇಲೆಯೇ ಕುಳಿತು ಭೋಜನ ಸವಿದರು. ಅಲ್ಲದೆ, ವಿದ್ಯಾರ್ಥಿಗಳಿಗೆ ಶಿಕ್ಷಣದ ಬಗ್ಗೆ ಸಲಹೆಗಳನ್ನು ನೀಡಿದರು.
ಇದನ್ನೂ ಓದಿ:ಆದಿಪುರುಷ್​​ ಸಿನಿಮಾಗೆ ಟಕ್ಕರ್​ ನೀಡಲು ಮುಂದಿನ ವಾರದಿಂದ ಟಿವಿಯಲ್ಲಿ ಪ್ರಸಾರವಾಗಲಿದೆ ರಾಮಾಯಣ!
ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಯುಡು, ಇನ್ನು ಕೆಲವೇ ತಿಂಗಳಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಿಳಿಸುತ್ತೇನೆ. ನಾನು ಈ ಜಿಲ್ಲೆಯ ಪ್ರತಿ ಪಟ್ಟಣ ಹಾಗೂ ಪ್ರದೇಶಕ್ಕೆ ಭೇಟಿ ನೀಡುತ್ತೇನೆ. ಈ ಹಿಂದೆ ಸಿಎಂರನ್ನು ಭೇಟಿ ಮಾಡಿದ್ದು ನಿಜ, ಆದರೆ ಆ ಸಭೆಯಲ್ಲಿ ರಾಜಕೀಯದ ಬಗ್ಗೆ ಚರ್ಚೆ ನಡೆದಿಲ್ಲ ಎಂದರು. ನಾನು ಜನಸೇವೆ ಮಾಡುತ್ತೇನೆ. ಆದರೆ, ಯಾವ ವೇದಿಕೆಯಿಂದ ಎಂಬುದನ್ನು ನಾನಿನ್ನೂ ನಿರ್ಧರಿಸಿಲ್ಲ. ಮುಂದಿನ ದಿನಗಳಲ್ಲಿ ನನ್ನ ಮುಂದಿನ ಯೋಜನೆಗಳ ಬಗ್ಗೆ ತಿಳಿಸುತ್ತೇನೆ ಎಂದರು.
ಅಂದಹಾಗೆ ರಾಯುಡು ಅವರು ಗುಂಟೂರು ಜಿಲ್ಲೆಯವರು. ಟೀಮ್​ ಇಂಡಿಯಾ ಮತ್ತು ಐಪಿಎಲ್​ನಲ್ಲಿ ಆಡಿದ್ದಾರೆ. ಅಲ್ಲದೆ, ಸಾಕಷ್ಟು ವಿವಾದಗಳಿಗೂ ಗುರಿಯಾಗಿದ್ದಾರೆ. ಇದೀಗ ರಾಜಕೀಯಕ್ಕೆ ಧುಮುಕಲು ಮುಂದಾಗಿದ್ದಾರೆ. ಗುಂಟೂರು ಲೋಕಸಭಾ ಕ್ಷೇತ್ರದಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.(ಏಜೆನ್ಸೀಸ್​)
ಟ್ರಿಪ್​​​​​​ಗೆ ಹೋದ ಹೆಂಡತಿ ಮನೆಗೆ ಬಂದಿಲ್ಲ, ಫ್ರೀ ಬಸ್ ಪ್ರಯಾಣ ರದ್ದುಗೊಳಿಸಿ ಎಂದ ಕುಡುಕ ಪತಿರಾಯ

ಟೈಟಾನ್​ ನೌಕೆಯ ಅವಶೇಷಗಳು ವಶಕ್ಕೆ: ಮಾನವನ ದೇಹದ ಭಾಗಗಳೂ ಪತ್ತೆ, ಹೆಚ್ಚಿನ ವಿಶ್ಲೇಷಣೆಗಾಗಿ ರವಾನೆ

ವಾಹನ ಸವಾರರಿಗೆ ಬಿಗ್​ ಶಾಕ್​: ಶೀಘ್ರವೇ ಈ ಹೆದ್ದಾರಿಯಲ್ಲಿ ಬೈಕ್, ಆಟೋ ಸಂಚಾರ ನಿಷೇಧ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − two =
Remember me
