ಶ್ರೀನಗರ:ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಐದನೇ ಹಂತದ ಮತದಾನಕ್ಕೆ ಚುನಾವಣಾ ಆಯೋಗ ತಯಾರಿ ನಡೆಸಿದೆ. ಮತದಾನಕ್ಕೆ ಎರಡು ದಿನಗಳು ಬಾಕಿ ಇರುವ ಸಮಯದಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಜಮ್ಮು-ಕಾಶ್ಮೀರದ ಶೋಫಿಯಾನ್​ ಹಾಗೂ ಅನಂತ್​ ನಾಗ್​ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
#WATCH| J&K: Visuals from outside the residence of BJP leader and ex-Sarpanch Aijaz Ahmad Sheikh, who was shot dead by terrorists yesterday in Heerpora, Shopian.https://t.co/GF4LTK64r4pic.twitter.com/6OHuDr3U0q
ಇದನ್ನೂ ಓದಿ:ಐಪಿಎಲ್​ನಲ್ಲಿ ಮತ್ತೊಂದು ವಿವಾದಾತ್ಮಕ ತೀರ್ಪು; ನಾಟೌಟ್​ ಇದ್ದರೂ ಔಟ್​ ಎಂದ ಅಂಪೈರ್​
ಶೋಫಿಯಾನ್​ ಜಿಲ್ಲೆಯ ಹುರ್​ಪುರ ಗ್ರಾಮದ ಮಾಜಿ ಸರ್​ಪಂಚ್, ಬಿಜೆಪಿ ಮುಖಂಡ​ ಐಜಾಜ್​ ಅಹ್ಮದ್​ ಶೇಖ್​ರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದು, ಘಟನೆ ನಡೆದ ಪ್ರದೇಶದ ಸುತ್ತ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಮೊದಲು ತೀವ್ರವಾದಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಐಜಾಜ್​ ಕಾಲಕ್ರಮೇಣ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಯಾಗಿ ಪರಿವರ್ತನೆಗೊಂಡಿದ್ದರು. ಐಜಾಜ್​ ಅವರ ಹತ್ಯೆಯನ್ನು ಪೊಲೀಸರು ಖಚಿತಪಡಿಸಿದ್ದಾರೆ.
ಅನಂತ್​ನಾಗ್​ ಜಿಲ್ಲೆಯ ಯನ್ನಾರ್​ ಪ್ರದೇಶದಲ್ಲಿ ಉಗ್ರರು ಜೈಪುರ ಮೂಲದ ದಂಪತಿ ಫರ್ಹಾ ಮತ್ತು ತರ್ಬೇಜ್​ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ದುಷ್ಕೃತ್ಯ ವ್ಯಾಪಕ ಖಂಡನೆಗೆ ಗುರಿಯಾಗಿದ್ದು, ಪಿಡಿಪಿ, ನ್ಯಾಷನಲ್​ ಕಾನ್ಫರೆನ್ಸ್​ ಹಾಗೂ ಬಿಜೆಪಿ ಘಟನೆಯನ್ನು ಖಂಡಿಸಿವೆ ಮತ್ತು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
