ನವದೆಹಲಿ:ಕೇಂದ್ರ ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ (70) ಅವರು ಬುಧವಾರ ಬೆಳಗ್ಗೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ದಿಲೀಪ್​ ಗಾಂಧಿ ಅವರಿಗೆ ಮಂಗಳವಾರ ಕರೊನಾ ಪಾಸಿಟಿವ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿರಿ:ಅತ್ತೆಗೆ ಟಿವಿ ಹುಚ್ಚು, ಸೊಸೆಗೆ ಮೊಬೈಲ್​ ಹುಚ್ಚು… ಇಬ್ಬರ ಹುಚ್ಚಿನಲ್ಲಿ ಪೊಲೀಸರು ಸುಸ್ತೋ ಸುಸ್ತು!
ದಿಲೀಪ್​ ಗಾಂಧಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಸಮುದಾಯ ಸೇವೆಗೆ ಮತ್ತು ಬಡವರಿಗೆ ಸಹಾಯ ಮಾಡಿದ್ದಕ್ಕಾಗಿ ದಿಲೀಪ್​ ಅವರನ್ನು ಸದಾ ಸ್ಮರಿಸಲಾಗುವುದು. ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಬಲಪಡಿಸಲು ಹಲವಾರು ಪ್ರಯತ್ನಗಳನ್ನು ಮಾಡಿದರು. ದುಃಖ ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನೀಡಲಿ ಎಂದು ಪ್ರಧಾನಿ ಟ್ವೀಟ್​ ಮಾಡಿದ್ದಾರೆ.
Saddened by the demise of former MP and Minister Shri Dilip Gandhi Ji. He will be remembered for his rich contributions to community service and helping the poor. He made numerous efforts to strengthen the BJP in Maharashtra. Condolences to his family and supporters. Om Shanti.
— Narendra Modi (@narendramodi)March 17, 2021

80ರ ದಶಕದಲ್ಲಿ ಕಾರ್ಪೊರೇಟರ್​ ಆಗಿ ರಾಜಕೀಯ ವೃತ್ತಿ ಆರಂಭಿಸಿದ ಗಾಂಧಿ, 1999ರಿಂದ ಮೂರು ಬಾರಿ ಮಹಾರಾಷ್ಟ್ರದ ಅಹ್ಮದ್​ನಗರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್​ ನಿರಾಕರಿಸಲಾಗಿತ್ತು. 2003ರ ವಾಜಪೇಯಿ ಸರ್ಕಾರದಲ್ಲಿ ಹಡಗು ಸಚಿವಾಲಯದ ಸಚಿವರಾಗಿದ್ದರು.
ದೆಹಲಿ ನಿವಾಸದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬಿಜೆಪಿ ಸಂಸದ ರಾಮ್​ ಸ್ವರೂಪ್​ ಶರ್ಮಾ ಶವ ಪತ್ತೆ

ಪ್ಲೀಸ್​ ಬಿಟ್ಟು ಹೋಗ್ಬೇಡ.. ಕಾಲಿಡಿದು ಗೋಗರೆದ್ರೂ ಬೈಕ್​ ಏರಿ ಮತ್ತೊಬ್ಬನ ಜತೆ ಹೊರಟೇ ಹೋದ್ಳು!

ಲಾರಿ ಡಿಕ್ಕಿಯ ರಭಸಕ್ಕೆ ಕುಸಿದ ಹೋಟೆಲ್ ಕಟ್ಟಡ: ಅದೃಷ್ಟವಶಾತ್​ ತಪ್ಪಿತು ಭಾರೀ ಅನಾಹುತ! ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − four =
Remember me
