ಕಲ್ಕತ್ತಾ:ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ಠಾರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತಗೆ ಪಕ್ಷಾಂತರ ಪರ್ವ ಕೂಡ ಶುರುವಾಗಿದೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಪ್ರಭಾವಿ ಕಾಂಗ್ರೆಸ್​ ನಾಯಕ ಎಂದು ಗುರುತಿಸಿಕೊಂಡಿದ್ದ ಕೌಸ್ತವ್ ಬಾಗ್ಚಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪಶ್ಚಿಮ ಬಂಗಾಳದ ರಾಜಧಾನಿ ಕಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಗೊಂಡ ಬಾಗ್ಚಿ ಅವರನ್ನು ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ, ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಸ್ವಾಗತಿಸಿ ಶುಭ ಹಾರೈಸಿದ್ದಾರೆ.
ಈ ಹಿಂದೆ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎಂದು ಆರೋಪಿಸಿ ಕೌಸ್ತವ್​ ಬಾಗ್ಚಿ ಅವರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ ಕೌಸ್ತವ್​ ಬಾಗ್ಚಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿ ಬಿಜೆಪಿ ಸೇರ್ಪಡೆಯಾಗಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + three =
Remember me
