ಮುಂಬೈ:  ಬಾಲಿವುಡ್​ನಟ ಸಲ್ಮಾನ್​​ ಖಾನ್​​  ಅವರ ಕಾರಿನ ಮೇಲೆ ಅಟ್ಯಾಕ್‌ ಮಾಡಲು ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ನೊಂದಿಗೆ ನಂಟು ಹೊಂದಿರುವ ನಾಲ್ವರು ವ್ಯಕ್ತಿಗಳನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಕೆನಡಾ ಮೂಲದ ಸೋದರಸಂಬಂಧಿ ಅನ್ಮೋಲ್ ಬಿಷ್ಣೋಯ್ ಮತ್ತು ಸಹವರ್ತಿ ಗೋಲ್ಡಿ ಬ್ರಾರ್ ಜತೆಗೆ ಪಾಕಿಸ್ತಾನಿ ಶಸ್ತ್ರಾಸ್ತ್ರ ವ್ಯಾಪಾರಿಯಿಂದ AK-47, M-16 ಮತ್ತು ಇತರ ಉನ್ನತ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಕಾರಿನ ಮೇಲೆ ದಾಳಿ ಮಾಡುವುದು ಮತ್ತು ತೋಟದ ಮನೆಯ ಮೇಲೆ ಅಟ್ಯಾಕ್‌ ಮಾಡುವುದು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್‌ ಆಗಿತ್ತು ಎನ್ನಲಾಗಿದೆ.
ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಬಿಷ್ಣೋಯ್, ಸಂಪತ್ ನೆಹ್ರಾ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + fifteen =
Remember me
