ಪಾಟ್ನಾ:ಆಟ ಆಡಲೆಂದು ಹೋದವರು ಮರಳಿ ಬರುವಾಗ ಸ್ನಾನಕ್ಕೆಂದು ನೀರಿಗಿಳಿದು ನದಿಯಲ್ಲಿ ಕೊಚ್ಚಿಹೋಗಿ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ನಾಲ್ವರೂ ಪೊಲೀಸರ ಮಕ್ಕಳು ಎಂಬುದು ತಿಳಿದುಬಂದಿದೆ.
ಪಾಟ್ನಾದ ಬುದ್ಧ ಕಾಲನಿ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್​ಸಿಟಿ ಘಾಟ್ ಪ್ರದೇಶದಲ್ಲಿ ಗಂಗಾ ನದಿ ತೀರದಲ್ಲಿ ಈ ದುರಂತ ಸಂಭವಿಸಿದೆ. ಒಟ್ಟು ಆರು ಮಂದಿ ಬಾಲಕರು ಜತೆಗಿದ್ದು ಆ ಪೈಕಿ ನಾಲ್ವರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.
ಆರೂ ಮಂದಿ ಪೊಲೀಸರ ಮಕ್ಕಳಾಗಿದ್ದು, ಎಲ್ಲರೂ ಒಟ್ಟಿಗೆ ಬೆಳಗ್ಗೆ ಕ್ರಿಕೆಟ್ ಆಡಲು ಹೋಗಿದ್ದರು. ಮರಳಿ ಬರುವಾಗ ಸ್ನಾನಕ್ಕೆಂದು ನೀರಿಗೆ ಇಳಿದಿದ್ದರು. ಆಗ ಒಬ್ಬ ನೀರಿನಲ್ಲಿ ಮುಳುಗಿದ್ದು, ಆತನನ್ನು ರಕ್ಷಿಸಲು ಇತರರೂ ಮುಂದಾಗಿದ್ದು, ಬಳಿಕ ನಾಲ್ವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಬೆಳಗ್ಗೆ 11.30 ರ ಸುಮಾರಿಗೆ ಈ ಪ್ರಕರಣ ನಡೆದಿದ್ದು, ಘಟನೆ ನಡೆದ ಅರ್ಧ ಗಂಟೆಯಲ್ಲಿ ಮೂವರ ಶವ ಪತ್ತೆ ಮಾಡಲಾಗಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು-ಬೈಕ್ ಭೀಕರ ಅಪಘಾತ; ಅಪ್ಪಳಿಸಿದ ಹೊಡೆತಕ್ಕೆ ಕಾರಿನ ಟಾಪ್​ಗೆ ನೆಗೆದುಬಿದ್ದ ಶವ!

ಸಮಸ್ಯೆ ಬಗೆಹರಿಸಿ ಎಂದು ಸಂಸದೆಯ ಕಾಲಿಗೆ ಬಿದ್ದ ಮಹಿಳೆ; ಅಸಮಾಧಾನ ವ್ಯಕ್ತಪಡಿಸಿದ ಸ್ಥಳೀಯರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + eight =
Remember me
