ನವದೆಹಲಿ:ನವದೆಹಲಿಯಿಂದ ವಿವಿಧ ಸ್ಥಳಗಳಿಗೆ ಮಂಗಳವಾರದಿಂದ 15 ಜೋಡಿ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜತೆಗಿನ ವಿಡಿಯೋ ಸಂವಾದದಲ್ಲಿ ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್​ ರಾವ್​ ಮೊದಲಿಗೆ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ತಮಿಳುನಾಡು ಸಿಎಂ ಪಳನಿಸ್ವಾಮಿ, ಆಂಧ್ರಪ್ರದೇಶ ಸಿಎಂ ಜಗನ್​ ಮೋಹನ್​ ರೆಡ್ಡಿ ಮತ್ತು ಛತ್ತೀಗಢದ ಸಿಎಂ ಭೂಪೇಶ್​ ಬಘೇಲ್​ ಧ್ವನಿಗೂಡಿಸಿದರು.
ಕರೊನಾ ಸೋಂಕಿಗೆ ಒಳಗಾಗಿರುವವರು ಯಾರು ಎಂಬುದನ್ನು ನಿಖರವಾಗಿ ಗುರುತಿಸಿ, ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್​ಗೆ ಕಳುಹಿಸಲು ಕಷ್ಟವಾಗುತ್ತದೆ. ಆದ್ದರಿಂದ, ರೈಲು ಸಂಚಾರ ಪುನರಾರಂಭಿಸುವುದರಿಂದ ಕರೊನಾ ಪಿಡುಗು ನಿಯಂತ್ರಣಕ್ಕೆ ತುಂಬಾ ತೊಂದರೆಯಾಗುತ್ತದೆ ಎಂದು ಕೆ.ಸಿ. ಚಂದ್ರಶೇಖರ್​ ರಾವ್​ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
