ನವದೆಹಲಿ:ಇಂದು (ಜೂ.03) ದೆಹಲಿಯ ಸರಿತಾ ವಿಹಾರ್‌ನಲ್ಲಿ ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಬೋಗಿಗಳಿಗೆ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣವೇ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ದೌಡಾಯಿಸಿ, ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ:ದುರಸ್ತಿ ನಿರೀಕ್ಷೆಯಲ್ಲಿ ಸರ್ಕಾರಿ ಶಾಲೆ, ಮೂಲಸೌಕರ್ಯ ಅವ್ಯವಸ್ಥೆ, ಬಿಡುಗಡೆಯಾಗದ ಅನುದಾನ
“ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ನಮಗೆ ಇಂದು ಸಂಜೆ 4.24ಕ್ಕೆ ಕರೆ ಬಂದಿತು. ತಕ್ಷಣವೇ ಎಂಟು ಅಗ್ನಿಶಾಮಕ ದಳವನ್ನು ಸೇವೆಗೆ ಕಳುಹಿಸಲಾಗಿದ್ದು, ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.
ಸದ್ಯ ಘಟನೆಯಲ್ಲಿ ಸಾವು ನೋವು ಸಂಭವಿಸಿದ ಯಾವುದೇ ವರದಿಗಳು ಇಲ್ಲಿಯವರೆಗೆ ಲಭಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seven =
Remember me
